PM Modi in Singapore: ಸಿಂಗಾಪುರದಲ್ಲಿ ಡೋಲು ಬಾರಿಸಿ ಸಂಭ್ರಮಿಸಿದ ಪ್ರಧಾನಿ ಮೋದಿ

PM Modi in Singapore: ಸಿಂಗಾಪುರದಲ್ಲಿ ಡೋಲು ಬಾರಿಸಿ ಸಂಭ್ರಮಿಸಿದ ಪ್ರಧಾನಿ ಮೋದಿ

ಸುಷ್ಮಾ ಚಕ್ರೆ
|

Updated on: Sep 04, 2024 | 3:00 PM

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಿಂಗಾಪುರ ಪ್ರವಾಸಕ್ಕೆ ತೆರಳಿದ್ದಾರೆ. ಈ ವೇಳೆ ಅವರನ್ನು ಭಾರತೀಯ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು ನೃತ್ಯ, ಡೋಲು ವಾದ್ಯಗಳ ಮೂಲಕ ಸ್ವಾಗತಿಸಲಾಯಿತು. ಆಗ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಡೋಲು ಬಾರಿಸಿದ್ದಾರೆ.

ಸಿಂಗಾಪುರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಾರತೀಯ ಡಯಾಸ್ಪೊರಾ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿದರು. ಮೋದಿಯವರನ್ನು ಸ್ವಾಗತಿಸಲು ಡೋಲು ವಾದ್ಯಗಳ ವ್ಯವಸ್ಥೆ ಮಾಡಲಾಗಿತ್ತು. ಡೋಲಿನ ಶಬ್ದ ಕೇಳಿ ಖುಷಿಯಾದ ಪ್ರಧಾನಿ ನರೇಂದ್ರ ಮೋದಿ ತಾವು ಕೂಡ ಆ ಡೋಲನ್ನು ಬಾರಿಸುವ ಮೂಲಕ ಸಂಭ್ರಮಿಸಿದ್ದಾರೆ. ಈ ವೀಡಿಯೋ ಶೀಘ್ರವಾಗಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಯಿತು.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ