AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಅನಂತಪುರ ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಬಸ್​​

ಬೆಂಗಳೂರು-ಅನಂತಪುರ ಹೆದ್ದಾರಿಯಲ್ಲಿ ಧಗಧಗನೆ ಹೊತ್ತಿ ಉರಿದ ಬಸ್​​

ಅಕ್ಷಯ್​ ಪಲ್ಲಮಜಲು​​
|

Updated on: Oct 17, 2025 | 3:35 PM

Share

ಬೆಂಗಳೂರು-ಅನಂತಪುರ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ಟೈರ್ ಬ್ಲಾಸ್ಟ್‌ನಿಂದ ಹೊತ್ತಿ ಉರಿದಿದೆ. ಬೆಂಗಳೂರಿನಿಂದ ರಾಯಚೂರಿಗೆ ತೆರಳುತ್ತಿದ್ದ ಈ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರೂ, ಎಲ್ಲಾ ಪ್ರಯಾಣಿಕರು ಸಮಯಕ್ಕೆ ಸರಿಯಾಗಿ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಮಧ್ಯರಾತ್ರಿ 2:30ರ ಸುಮಾರಿಗೆ ಸಂಭವಿಸಿದ್ದು, ವಿದ್ಯಾರ್ಥಿಗಳ ಪ್ರಮಾಣಪತ್ರಗಳು ಮತ್ತು ದುಬಾರಿ ವಸ್ತುಗಳು ಸುಟ್ಟು ಕರಕಲಾಗಿವೆ.

ಬೆಂಗಳೂರು, ಅ.17: ಬೆಂಗಳೂರು-ಅನಂತಪುರ ಹೆದ್ದಾರಿಯಲ್ಲಿ (Bengaluru-Ananthpur Highway) ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್​​​ ಸಂಪೂರ್ಣ ಭಸ್ಮವಾಗಿದೆ. ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಈ ಬಸ್‌ನ ಟೈರ್ ಬ್ಲಾಸ್ಟ್ ಆಗಿದೆ, ಈ ವೇಳೆ ಏಕಾಏಕಿ ಬಸ್​​ಗೆ ​​ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಬಸ್​​​ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ. ಬಸ್​​​​ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಕೂಡಲೇ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಧ್ಯರಾತ್ರಿ 2:30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈ ಬಸ್ಸಿನಲ್ಲಿ ಹಬ್ಬಕ್ಕೆಂದು ಊರಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಕೂಡ ಇದ್ದರು. ಇನ್ನು ಈ ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಪ್ರಮಾಣಪತ್ರಗಳು ಮತ್ತು ದುಬಾರಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಇನ್ನು ಈ ಘಟನೆಗೆ ಬಸ್​ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ. ಬಸ್ಸಿನಲ್ಲಿ ಸುಟ್ಟ ವಾಸನೆ ಬರುತ್ತಿದೆ ಎಂದು ಹೇಳಿದ್ರು ಚಾಲಕ ಬಸ್ ನಿಲ್ಲಿಸಿಲ್ಲ ಎಂದು ಪ್ರಯಾಣಿಕರು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More