Video: ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಬೈಕ್ಗೆ ಡಿಕ್ಕಿ, ಕ್ಷಣಾರ್ಧದಲ್ಲಿ ಹೊತ್ತಿ ಉರಿದ ವೋಲ್ವೊ ಬಸ್
ಹೈದರಾಬಾದಿನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೋ ಬಸ್ ಆಂಧ್ರಪ್ರದೇಶದ ಕರ್ನೂಲ್ನಲ್ಲಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಆ ವೇಳೆ ಬಸ್ನಲ್ಲಿ 40 ಮಂದಿ ಪ್ರಯಾಣಿಕರಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ, ಕಾವೇರಿ ಟ್ರಾವೆಲ್ಸ್‌ನ ವೋಲ್ವೋ ಬಸ್ ಹೈದರಾಬಾದ್‌ನಿಂದ ಬೆಂಗಳೂರಿಗೆ ಹೋಗುತ್ತಿತ್ತು. ಅದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬಸ್ಸಿನ ಕೆಳಗೆ ಸಿಲುಕಿಕೊಂಡಿತ್ತು.
ಕರ್ನೂಲ್, ಅಕ್ಟೋಬರ್ 24: ಹೈದರಾಬಾದಿನಿಂದ ಬೆಂಗಳೂರಿಗೆ ಹೊರಟಿದ್ದ ವೋಲ್ವೊ ಬಸ್ ಆಂಧ್ರಪ್ರದೇಶದ ಕರ್ನೂಲ್ನಲ್ಲಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಆ ವೇಳೆ ಬಸ್ನಲ್ಲಿ 40 ಮಂದಿ ಪ್ರಯಾಣಿಕರಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ, ಕಾವೇರಿ ಟ್ರಾವೆಲ್ಸ್‌ನ ವೋಲ್ವೊ ಬಸ್ ಹೈದರಾಬಾದ್‌ನಿಂದ ಬೆಂಗಳೂರಿಗೆ ಹೋಗುತ್ತಿತ್ತು. ಅದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬಸ್ಸಿನ ಕೆಳಗೆ ಸಿಲುಕಿಕೊಂಡಿತ್ತು. ಆಗ ಬೈಕ್ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. 10 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಸಿ ಬಸ್ ಆಗಿರುವುದರಿಂದ ಕಿಟಕಿಗಳನ್ನು ಒಡೆದು ಪ್ರಯಾಣಿಕರನ್ನು ಹೊರತರಲಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ಪಾಟೀಲ್ ಹೇಳಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

