ಬೈಕ್​​ ತಪ್ಪಿಸಲು ಹೋಗಿ ಶಿಕಾರಿಪುರದಲ್ಲಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Edited By:

Updated on: Apr 13, 2026 | 11:30 AM

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕುಮದ್ವತಿ ಕಾಲೇಜು ಬಳಿ ಎದುರಿದ್ದ ಬೈಕ್ ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ಬಸ್​​ ಪಲ್ಟಿಯಾಗಿದೆ ಎನ್ನಲಾಗಿದೆ.

ಶಿವಮೊಗ್ಗ, ಏಪ್ರಿಲ್​​ 13: ಎದುರಿಗೆ ತೆರಳುತ್ತಿದ್ದ ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕುಮದ್ವತಿ ಕಾಲೇಜು ಮುಂಭಾಗ ನಡೆದಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ವಿದ್ಯುತ್​​ ಕಂಬಕ್ಕೆ ಗುದ್ದಿ ಬಸ್​​ ಪಲ್ಟಿಯಾಗಿದ್ದು, ಹಂಪ್​​ ತಪ್ಪಿಸಲು ಯತ್ನಿಸಿದ ಬೈಕ್​​ ಸವಾರ ಎಡ ಮತ್ತು ಬಲ ಎರಡೂ ಕಡೆ ಒಂದೇ ಸಮನೆ ಬಂದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More