AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್​​ ಅಪಘಾತ: 15 ಮಂದಿಗೆ ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್​​ ಅಪಘಾತ: 15 ಮಂದಿಗೆ ಗಂಭೀರ ಗಾಯ

ಸಂಜಯ್ಯಾ ಚಿಕ್ಕಮಠ
| Edited By: |

Updated on:Oct 15, 2026 | 10:29 AM

Share

ಹುಬ್ಬಳ್ಳಿ ತಾಲೂಕಿನ ಛಬ್ಬಿ ಕ್ರಾಸ್ ಬಳಿ ಮುಂಬೈನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಚಾಲಕ ಸೇರಿದಂತೆ 15 ಜನರಿಗೆ ಗಂಭೀರ ಗಾಯಗಳಾಗಿವೆ. ಬಸ್​​ನಲ್ಲಿ ಒಟ್ಟು 26 ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹುಬ್ಬಳ್ಳಿ, ಅಕ್ಟೋಬರ್​​ 15: ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಖಾಸಗಿ ಬಸ್​ ನುಗ್ಗಿದ ಪರಿಣಾಮ ಚಾಲಕ ಸೇರಿದಂತೆ 15 ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಛಬ್ಬಿ ಕ್ರಾಸ್ ಬಳಿ ನಡೆದಿದೆ. ಮುಂಬೈನಿಂದ ಬೆಂಗಳೂರು ಕಡೆ ಹೊರಟಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದಿದ್ದು, ಬಸ್​​ನಲ್ಲಿ ಒಟ್ಟು 26 ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬಸ್​​ನಲ್ಲಿದ್ದವರ ರಕ್ಷಣೆ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ

Published on: Oct 15, 2026 10:28 AM

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More