ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದ ಖಾಸಗಿ ಎಲೆಕ್ಟ್ರಿಕ್ ಬಸ್; ಸಂಚಾರ ಅಸ್ತವ್ಯಸ್ತ
ಬೆಂಗಳೂರಿನ ರಾಜಾರಾಮ್ ಮೋಹನ್ ರಾಯ್ ರಸ್ತೆಯಲ್ಲಿ ಬೆಳಗಿನಜಾವ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಎಲೆಕ್ಟ್ರಿಕ್ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಾಲಕ, ನಿರ್ವಾಹಕನಿಗೆ ಸಣ್ಣ ಗಾಯಗಳಾಗಿದ್ದು, ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಕ್ರೇನ್ ಮೂಲಕ ಸಂಚಾರ ಪೊಲೀಸರು ಖಾಸಗಿ ಬಸ್ ತೆರವುಗೊಳಿಸುವ ಕೆಲಸ ಮಾಡಿದ್ದಾರೆ.
ಬೆಂಗಳೂರು, ನವೆಂಬರ್ 28: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಎಲೆಕ್ಟ್ರಿಕ್ ಬಸ್ ಡಿವೈಡರ್‌ಗೆ ಗುದ್ದಿರುವ ಘಟನೆ ಬೆಂಗಳೂರಿನ ರಾಜಾರಾಮ್ ಮೋಹನ್ ರಾಯ್ ರಸ್ತೆಯಲ್ಲಿ ನಡೆದಿದೆ. ಬೆಳಗಿನಜಾವ 5.10ರ ಸುಮಾರಿಗೆ ಅಪಘಾತ ನಡೆದಿದ್ದು, ಬಸ್ ಚಾಲಕ ಹಾಗೂ ನಿರ್ವಾಹಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯಿಂದಾಗಿ ಕಾರ್ಪೊರೇಷನ್ ಸಂಪರ್ಕಿಸುವ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ಜಾಮ್ ಉಂಟಾಗಿದ್ದು, ಕ್ರೇನ್ ಮೂಲಕ ಸಂಚಾರ ಪೊಲೀಸರು ಖಾಸಗಿ ಬಸ್ ತೆರವುಗೊಳಿಸುವ ಕೆಲಸ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us

