ಖಾಸಗಿ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದ ಬಾಣಂತಿ ಸಾವು
[lazy-load-videos-and-sticky-control id=”QbTo4o_2Wlk”] ಬೆಂಗಳೂರು: ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಹತ್ತು ದಿನಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದ ಬಾಣಂತಿ ತೀವ್ರ ಉಸಿರಾಟದ ಸಮಸ್ಯೆಯಿಂದ ಸಾವನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸುಂಕದಕಟ್ಟೆ ನಿವಾಸಿಯಾಗಿರುವ ಬಾಣಂತಿ 10 ದಿನಗಳ ಹಿಂದೆ ಸುಂಕದಕಟ್ಟೆ ಬಳಿಯ ಖಾಸಗಿ ಆಸ್ಪತ್ರೆಗೆ ಹೆರಿಗೆಗೆಂದು ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಅವಳಿ ಜವಳಿ ಮಕ್ಕಳಿಗೆ ಜನನ ನೀಡಿದ ಬಾಣಂತಿ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಅವರನ್ನು ಡಿಸ್ಚಾರ್ಜ್ ಮಾಡಿದ್ದರು. ಆದರೆ 21 ವರ್ಷದ ಬಾಣಂತಿಗೆ ಇದ್ದಕ್ಕಿದ್ದಂತೆ ಉಸಿರಾಟದ […]
[lazy-load-videos-and-sticky-control id=”QbTo4o_2Wlk”]
ಬೆಂಗಳೂರು: ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಹತ್ತು ದಿನಗಳ ಹಿಂದೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದ ಬಾಣಂತಿ ತೀವ್ರ ಉಸಿರಾಟದ ಸಮಸ್ಯೆಯಿಂದ ಸಾವನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಸುಂಕದಕಟ್ಟೆ ನಿವಾಸಿಯಾಗಿರುವ ಬಾಣಂತಿ 10 ದಿನಗಳ ಹಿಂದೆ ಸುಂಕದಕಟ್ಟೆ ಬಳಿಯ ಖಾಸಗಿ ಆಸ್ಪತ್ರೆಗೆ ಹೆರಿಗೆಗೆಂದು ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಅವಳಿ ಜವಳಿ ಮಕ್ಕಳಿಗೆ ಜನನ ನೀಡಿದ ಬಾಣಂತಿ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಅವರನ್ನು ಡಿಸ್ಚಾರ್ಜ್ ಮಾಡಿದ್ದರು.
ಆದರೆ 21 ವರ್ಷದ ಬಾಣಂತಿಗೆ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಜಾಸ್ತಿಯಾಗಿದೆ. ಇದರಿಂದ ಗಾಬರಿಗೊಂಡ ಕುಟುಂಬಸ್ಥರು ಬಾಣಂತಿಯನ್ನು ನಾಲ್ಕೈದು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಖಾಸಗಿ ಆಸ್ಪತ್ರೆಯ ಸಿಬ್ಬಂದಿಗಳು ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಇಲ್ಲವೆಂಬ ಕಾರಣ ಹೇಳಿ ಬಾಣಂತಿಯನ್ನು ವಾಪಸ್ ಕಳಿಸಿದ್ದಾರೆ.
ಗಂಭೀರ ಸ್ಥಿತಿಯಲ್ಲಿದ್ದ ಬಾಣಂತಿಯನ್ನು ಸಂಜೆ ವೇಳೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡಿದ್ದಾರೆ. ಆದರೆ ದಾಖಲಿಸಿಕೊಂಡ ಕೆಲವೇ ನಿಮಿಷಗಳಲ್ಲಿ ತೀವ್ರ ಉಸಿರಾಟದ ಸಮಸ್ಯೆಯಿಂದ ಬಾಣಂತಿ ಸಾವನ್ನಪ್ಪಿದ್ದಾರೆ. ಬಾಣಂತಿ ಕೊರೊನಾ ಸೋಂಕಿಗೆ ತುತ್ತಾಗಿರಬಹುದು ಎಂದು ಆಸ್ಪತ್ರೆಯ ವೈದ್ಯರು ಶಂಕಿಸಿದ್ದಾರೆ. ಆದರೆ ಆಸ್ಪತ್ರೆಗಳ ನಿರ್ಲಕ್ಷ್ಯದಿಂದಾಗಿ ಬಾಣಂತಿ ಸಾವನ್ನಪ್ಪಿದ್ದಾರೆಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.
Published On - 11:35 am, Sun, 2 August 20