ಪ್ರಧಾನಿ ಮೋದಿಯವರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ: ವಿಶ್ವೇಶ್ವರ ಹೆಗಡೆ ಕಾಗೇರಿ

ಪ್ರಧಾನಿ ಮೋದಿಯವರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ: ವಿಶ್ವೇಶ್ವರ ಹೆಗಡೆ ಕಾಗೇರಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 25, 2024 | 10:18 AM

ಅನಂತ ಕುಮಾರ್ ಹೆಗಡೆ ಮತ್ತು ತಾನು ಜೊತೆಯಾಗಿ ಕೆಲಸ ಮಾಡುತ್ತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಎಲ್ಲರಿಗೂ ತಲುಪಿಸಿದ್ದೇವೆ, ಆರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಅವರಿಗೆ ಅಪಾರವಾದ ಅನುಭವ ಇದೆ, ಅವರ ಸಲಹೆ ಸೂಚನೆ ಕೇಳುವುದಾಗಿ ಕಾಗೇರಿ ಹೇಳಿದರು.

ಕಾರವಾರ: ಬಿಜೆಪಿ ವರಿಷ್ಠರಾದ ಜೆಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ (PM Narendra Modi), ಅಮಿತ್ ಶಾ (Amit Shah) ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಬೇರೆ ಎಲ್ಲ ನಾಯಕರು ತನ್ನ ಮೇಲೆ ವಿಶ್ವಾಸವಿಟ್ಟು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹಾಲಿ ಶಾಸಕ ಅನಂತಕುಮಾರ್ ಹೆಗಡೆ ಬದಲಿಗೆ ಟಿಕೆಟ್ ಗಿಟ್ಟಿಸಿರುವ ಹಿರಿಯ ಬಿಜೆಪಿ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಹೇಳಿದರು. ಟಿವಿ9 ಕಾರವಾರ ಪ್ರತಿನಿಧಿಯೊಂದಿಗೆ ಮಾತಾಡಿದ ಕಾಗೇರಿ, ಸುದೀರ್ಘ ರಾಜಕೀಯ ಅನುಭವದ ಹಿನ್ನೆಲೆಯಲ್ಲಿ ತನಗೆ ಟಿಕೆಟ್ ಸಿಕ್ಕಿದೆ, ದೇಶಕ್ಕಾಗಿ ಅದ್ಭುತವಾವ ಸಾಧನೆಗಳನ್ನು ಮಾಡಿರುವ ಪ್ರಧಾನಿ ಮೋದಿಯರವ ಜೊತೆ ಕೆಲಸ ಮಾಡುವ ಸೌಭಾಗ್ಯ ತನಗೆ ಸಿಕ್ಕಿದೆ, ಅವರ ಸಾಧನೆಗಳು ಜನಸಾಮಾನ್ಯರಿಗೂ ತಲುಪಿವೆ ಹಾಗಾಗಿ ದಾಖಲೆ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ ಮತ್ತು ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳು ಅದೇ ವೇಗದಲ್ಲಿ ಮುಂದುವರಿಯಲಿವೆ ಎಂದು ಕಾಗೇರಿ ಹೇಳಿದರು. ಅನಂತ ಕುಮಾರ್ ಹೆಗಡೆ ಮತ್ತು ತಾನು ಜೊತೆಯಾಗಿ ಕೆಲಸ ಮಾಡುತ್ತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಎಲ್ಲರಿಗೂ ತಲುಪಿಸಿದ್ದೇವೆ, ಆರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಅವರಿಗೆ ಅಪಾರವಾದ ಅನುಭವ ಇದೆ, ಅವರ ಸಲಹೆ ಸೂಚನೆ ಕೇಳುವುದಾಗಿ ಕಾಗೇರಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು ಓದಿ: UPSC Prelims Exam 2024 : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯುಪಿಎಸ್​​ಸಿ ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆ