200 ರೂ. ಟಿಕೆಟ್ ದರ ನಿಗದಿಗೆ ಮಲ್ಟಿಪ್ಲೆಕ್ಸ್ ಒಕ್ಕೂಟ ಆಕ್ಷೇಪ: ಪ್ರಿಯಾ ಹಾಸನ್ ಪ್ರತಿಕ್ರಿಯೆ

Updated on: Sep 16, 2025 | 7:58 PM

ಸಿನಿಮಾ ಟಿಕೆಟ್ ದರ 200 ರೂಪಾಯಿ ಮೀರಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಅದನ್ನು ಪ್ರಶ್ನಿಸಿ ಮಲ್ಟಿಪ್ಲೆಕ್ಸ್ ಒಕ್ಕೂಟವು ಕೋರ್ಟ್​​ಗೆ ಅರ್ಜಿ ಹಾಕಿದೆ. ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ಮಾಡಲಾಗಿದೆ. ನಟಿ, ನಿರ್ಮಾಪಕಿ ಪ್ರಿಯಾ ಹಾಸನ್ ಅವರು ಈ ವೇಳೆ ಮಾತನಾಡಿದರು.

‘ಸಿನಿಮಾ ಟಿಕೆಟ್ ಬೆಲೆ (Movie Ticket Price) 200 ರೂಪಾಯಿಗೆ ನಿಗದಿ ಮಾಡಿರುವುದಕ್ಕೆ ಕೆಲವರ ವಿರೋಧ ಇದೆ. ಅಂಥವರು ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ. ನಮಗೆ ಅದು ಸರಿ ಎನಿಸಿಲ್ಲ. ಹಾಗಾಗಿ ನಾವೆಲ್ಲ ನಿರ್ಮಾಪಕರು ಸೇರಿ ವಾಣಿಜ್ಯ ಮಂಡಳಿಯಿಂದ (Karnataka Film Chamber of Commerce) ಮನವಿ ಕೊಡುತ್ತಿದ್ದೇವೆ. 200 ರೂಪಾಯಿ ಟಿಕೆಟ್ ದರದಿಂದ ಪ್ರೇಕ್ಷಕರಿಗೆ ಅನುಕೂಲ ಆಗುತ್ತಿದೆ. ಟಿಕೆಟ್ ಬೆಲೆ ಕಡಿಮೆ ಇದ್ದರೆ ಫ್ಯಾಮಿಲಿ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಾರೆ. ಇದನ್ನು ಅರ್ಥ ಮಾಡಿಕೊಂಡು ನಮ್ಮ ಮನವಿಯನ್ನು ಸ್ವೀಕರಿಸಿ ಮಲ್ಟಿಪ್ಲೆಕ್ಸ್ ಒಕ್ಕೂಟದವರು ತಮ್ಮ ಅರ್ಜಿಯನ್ನು ವಾಪಸ್ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ನ್ಯಾಯಾಲಯಕ್ಕೆ ಹೋಗಿ ಫೈಟ್ ಮಾಡಲು ನಾವು ಕೂಡ ರೆಡಿ ಇದ್ದೇವೆ’ ಎಂದು ಪ್ರಿಯಾ ಹಾಸನ್ (Priya Hassan) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More