AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ ಸುದೀಪ್; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ

ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ ಸುದೀಪ್; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ

ರಾಜೇಶ್ ದುಗ್ಗುಮನೆ
|

Updated on: Nov 09, 2026 | 10:32 AM

Share

ಪ್ರಿಯಾ ಸುದೀಪ್ ಅವರು ದೀಪಾವಳಿ ಹಿನ್ನೆಲೆಯಲ್ಲಿ ಹಾಸನಾಂಬೆ ದೇವಿಯ ದರ್ಶನ ಪಡೆದರು. ಮೊದಲ ಬಾರಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು, ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿದರು. ಪ್ರತಿ ವರ್ಷ ತಮ್ಮ ಅತ್ತೆಯವರು ಭೇಟಿ ನೀಡುತ್ತಿದ್ದರು ಎಂದ ಪ್ರಿಯಾ, ಅಮ್ಮನ ದರ್ಶನ ಪಡೆದು ತಮಗೆ ತುಂಬಾ ಖುಷಿಯಾಯಿತು ಎಂದು ಸಂತಸ ವ್ಯಕ್ತಪಡಿಸಿದರು.

ದೀಪಾವಳಿ ಹಬ್ಬದ ಸಡಗರದ ನಡುವೆ, ಖ್ಯಾತ ನಟ ಕಿಚ್ಚ ಸುದೀಪ್ ಅವರ ಪತ್ನಿ ಪ್ರಿಯಾ ಸುದೀಪ್ ಅವರು ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ. ಹನ್ನೊಂದನೇ ದಿನದ ಸಾರ್ವಜನಿಕ ದರ್ಶನದ ವೇಳೆ ದೇವಾಲಯಕ್ಕೆ ಭೇಟಿ ನೀಡಿದ ಪ್ರಿಯಾ, ತಮಗೆ ದೇವಿಯ ದರ್ಶನ ಆಗಿದ್ದು ತುಂಬಾ ಖುಷಿಯಾಗಿದೆ ಎಂದು ತಿಳಿಸಿದರು. ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದ ಅವರು, ಭಕ್ತರ ದರ್ಶನಕ್ಕೆ ಅನುಕೂಲಕರವಾದ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಹೇಳಿದರು.

ಈ ಬಾರಿಯ ದರ್ಶನದ ಬಗ್ಗೆ ಮಾತನಾಡಿ, ‘ನಾನು ಮೊದಲ ಬಾರಿಗೆ ಹಾಸನಾಂಬೆ ದೇವಿಯ ದರ್ಶನಕ್ಕೆ ಬಂದಿದ್ದೇನೆ. ಪ್ರತಿ ವರ್ಷ ನನ್ನ ಅತ್ತೆಯವರು ಇಲ್ಲಿಗೆ ಬರುತ್ತಿದ್ದರು. ಈ ವರ್ಷ ಅಮ್ಮನ ದರ್ಶನ ಮಾಡಿದ್ದು ನನಗೆ ತುಂಬಾ ಸಂತೋಷ ತಂದಿದೆ’ ಎಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More