ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

Edited By:

Updated on: Oct 08, 2026 | 2:46 PM

ರಾಜ್ಯ ಸರ್ಕಾರವನ್ನು ಕೆಡವಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಐಟಿ, ಇ.ಡಿ. ಹಾಗೂ ಸಿಬಿಐ ನಂತಹ ಕೇಂದ್ರದ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಸ್ಟಿಂಗ್ ಆಪರೇಷನ್ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಯುತ್ತಿದೆ. ಮಹಾರಾಷ್ಟ್ರ, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಹಿಂದೆ ಇಂತಹ ಪ್ರಯತ್ನಗಳು ನಡೆದಿವೆ ಎಂದು ಖರ್ಗೆ ಹೇಳಿದ್ದಾರೆ.

ಬೆಂಗಳೂರು, ಅಕ್ಟೋಬರ್​​ 08: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರವು ಪ್ರಯತ್ನಿಸುತ್ತಿದೆ ಎಂದು ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರವು ಐಟಿ, ಇ.ಡಿ., ಸಿಬಿಐ ನಂತಹ ಸಂಸ್ಥೆಗಳನ್ನು ಬಳಸಿಕೊಂಡು ರಾಜ್ಯ ಸರ್ಕಾರವನ್ನು ಕೆಡವಲು ಪ್ರಯತ್ನಿಸುತ್ತಿದೆ. ಈ ಹಿಂದೆಯೂ ಮಹಾರಾಷ್ಟ್ರ, ಅಸ್ಸಾಂ, ಗೋವಾ, ಆಂಧ್ರಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಇದೇ ರೀತಿ ಕೇಂದ್ರ ಪ್ರಾಯೋಜಿತ “ಸ್ಟಿಂಗ್ ಆಪರೇಷನ್‌”ಗಳು ನಡೆದಿವೆ ಎಂದವರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಸುನಿಲ್​ ಎಮ್​ ಹೆಚ್​