AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಲ್ಲ, ಚುನಾವಣಾ ಆಯೋಗದ ಗೆಲುವೆಂದ ಪ್ರಿಯಾಂಕ್ ಖರ್ಗೆ!

ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಲ್ಲ, ಚುನಾವಣಾ ಆಯೋಗದ ಗೆಲುವೆಂದ ಪ್ರಿಯಾಂಕ್ ಖರ್ಗೆ!

ಗಣಪತಿ ಶರ್ಮಾ
|

Updated on: May 05, 2026 | 12:12 PM

Share

ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಗೆಲುವಿನ ವಿರುದ್ಧ ಕರ್ನಾಟಕದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. 91 ಲಕ್ಷಕ್ಕೂ ಹೆಚ್ಚು ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹೇಳಿದ್ದು, ಇದು ಚುನಾವಣಾ ಆಯೋಗದ ವಿಜಯವೇ ಹೊರತು ಬಿಜೆಪಿಯದ್ದಲ್ಲ ಎಂದು ಟೀಕಿಸಿದ್ದಾರೆ. ಮಹಾರಾಷ್ಟ್ರ, ಮಧ್ಯಪ್ರದೇಶ್ ಮತ್ತು ಹರಿಯಾಣದಲ್ಲೂ ಇದೇ ರೀತಿಯ ಘಟನೆಗಳು ನಡೆದಿದ್ದವು ಎಂದು ಖರ್ಗೆ ಪ್ರತಿಪಾದಿಸಿದ್ದಾರೆ.

ಬೆಂಗಳೂರು, ಮೇ 5: ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವುದೂ ಸೇರಿದಂತೆ ಚುನಾವಣಾ ಆಯೋಗದ ಹಲವು ಕ್ರಮಗಳೇ ಬಿಜೆಪಿ ಗೆಲುವಿಗೆ ಕಾರಣವಾಯಿತು ಎಂದು ಕರ್ನಾಟಕದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಆ ಪಕ್ಷದ ಗೆಲುವಲ್ಲ. ಅದು ಚುನಾವಣಾ ಆಯೋಗದ ಜಯ ಎಂದು ಅವರು ಬಣ್ಣಿಸಿದ್ದಾರೆ. ಚುನಾವಣಾ ಆಯೋಗವನ್ನು ಜೇಬಿನಲ್ಲಿ ಇಟ್ಟುಕೊಂಡು ಚುನಾವಣೆ ನಡೆಸಿದ್ದರು ಎಂದು ಖರ್ಗೆ ಆರೋಪಿಸಿದ್ದಾರೆ.

ಸುಮಾರು ಒಂದು ಕೋಟಿ ಜನರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. 27 ರಿಂದ 28 ಲಕ್ಷ ಅರ್ಹ ಜನರು ಟ್ರಿಬ್ಯುನಲ್‌ಗಳಿಗೆ ಅರ್ಜಿ ಸಲ್ಲಿಸಿದರೂ ಅವರ ವಾದವನ್ನು ಆಲಿಸಲಾಗಿಲ್ಲ ಎಂದು ಖರ್ಗೆ ದೂರಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಶೇ 4ರಷ್ಟು ವ್ಯತ್ಯಾಸದಿಂದ 80 ರಿಂದ 100 ಸ್ಥಾನಗಳ ಮೇಲೆ ಪರಿಣಾಮ ಬೀರಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ್ ಮತ್ತು ಹರಿಯಾಣದಲ್ಲಿ ಇದೇ ರೀತಿಯಲ್ಲಿ ಬಿಜೆಪಿ ಚುನಾವಣಾ ಪ್ರಕ್ರಿಯೆಯನ್ನು ನಿಯಂತ್ರಿಸಿತ್ತು ಎಂದು ಅವರು ಆರೋಪಿಸಿದ್ದಾರೆ. ಕರ್ನಾಟಕದಲ್ಲೂ ಇದೇ ರೀತಿ ಆಗಬಹುದು ಎಂದು ಖರ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us