ಹಿಂದೂಗಳು ಟಾರ್ಗೆಟ್ ಆಗಿದ್ದನ್ನು ಅಲ್ಲಗಳೆಯುವ ಪ್ರಿಯಾಂಕ್ ಖರ್ಗೆ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ: ಚಲವಾದಿ

ಅರುಣ್​ ಕುಮಾರ್​ ಬೆಳ್ಳಿ

Updated on: Apr 25, 2025 | 7:03 PM

ಭಾರತೀಯರು ಪ್ರವಾಸಕ್ಕೆಂದು ಜಮ್ಮು ಮತ್ತು ಕಾಶ್ಮೀರವನ್ನು ಆಯ್ಕೆ ಮಾಡಿಕೊಳ್ಳೋದು ನಿಲ್ಲಿಸಬೇಕು, ಅದನ್ನು ಬೆಳೆಸುವುದು ಬೇಡ ಎನ್ನುವ ನಾರಾಯಣ ಸ್ವಾಮಿ ಚಲವಾದಿ, ಭಯೋತ್ಪಾದಕರ ಜೊತೆ ಯಾರೇ ಗುರುತಿಸಿಕೊಂಡರೆ, ಅವರ ಪರ ಸಹಾನುಭೂತಿ ತೋರಿದರೆ ಅವರ ರುಂಡ ಚೆಂಡಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.

ಬೆಂಗಳೂರು, ಏಪ್ರಿಲ್ 25: ಪಹಲ್ಗಾಮ್ ನಲ್ಲಿ ಉಗ್ರರು ಹಿಂದೂ ಮತ್ತು ಮುಸಲ್ಮಾನ ಪ್ರವಾಸಿಗರನ್ನು ಬೇರ್ಪಡಿಸಿ ಕೇವಲ ಹಿಂದೂಗಳನ್ನು ಟಾರ್ಗೆಟ್ ಮಾಡಿಕೊಂಡು ಗುಂಡಿಕ್ಕಿ ಕೊಂದಿದ್ದಾರೆ, ಆದರೆ ಕೆಲ ಕಾಂಗ್ರೆಸ್ ನಾಯಕರು ಈ ಅಂಶವನ್ನು ಅಲ್ಲಳೆಯುತ್ತಿದ್ದಾರೆ ಎಂದು ವಿಧಾನ ಪರಿಷತ್ ನಲ್ಲಿ ವಿರೋಧ ಪಕ್ಷದ ನಾಯಕ ನಾರಾಯಣ ಸ್ವಾಮಿ ಚಲವಾದಿ (Narayana Swamy Chalavadi) ಹೇಳಿದರು. ಸಚಿವ ಪ್ರಿಯಾಂಕ್ ಖರ್ಗೆ ಅವರೇನಾದರೂ ಪಹಲ್ಗಾಮ್ ಘಟನೆಯನ್ನು ಕಣ್ಣಾರೆ ವೀಕ್ಷಿಸಿದ್ದಾರಾ? ತಮ್ಮ ತಂದೆ, ಚಿಕ್ಕಪ್ಪ, ಮಾವ ಮುಂತಾದವರ ಮೇಲೆ ಉಗ್ರರು ದಾಳಿ ನಡೆಸಿ ಕೊಂದಿದ್ದನ್ನು ಕಣ್ಣಾರೆ ನೋಡಿರುವ ಮಕ್ಕಳು ಹಿಂದೂಗಳನ್ನೇ ಟಾರ್ಗೆಟ್ ಮಾಡಿದ್ದರು ಅಂತ ಹೇಳುತ್ತಿದ್ದಾರೆ, ಕಾಂಗ್ರೆಸ್ ಬಹಳ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ, ಅದರ ನಾಯಕರ ಮಾತುಗಳನ್ನು ಕೇಳುತ್ತಿದ್ದರೆ ಭಾರತಕ್ಕೆ ಉಗ್ರಗಾಮಿಗಳಿಗಿಂತ ಅವರಿಂದಲೇ ಹೆಚ್ಚು ಗಂಡಾಂತರವಿದೆ ಅನಿಸುತ್ತದೆ ಎಂದು ಚಲವಾದಿ ಹೇಳಿದರು

ಇದನ್ನೂ ಓದಿ:  Pahalgam Terrorist Attack: ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.