ರಾಮನ ಹೆಸರಲ್ಲೇ ಲೂಟಿ ಮಾಡುವ ಬಿಜೆಪಿಯವರು ಮಂಜುನಾಥಸ್ವಾಮಿ ಹೆಸರಿನಲ್ಲಿ ಸತ್ಯ ಹೇಳ್ತಾರಾ?: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ

Edited By:

Updated on: Jun 22, 2026 | 1:49 PM

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿಗರಿಂದ ಧರ್ಮಸ್ಥಳದಲ್ಲಿ ಆಣೆ ಪ್ರಮಾಣದ ವಿಚಾರ ಸಂಬಂಧ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ತನ್ನ ಆಂತರಿಕ ಭಿನ್ನಾಭಿಪ್ರಾಯ, ಅಡ್ಡ ಮತದಾನದ ಬಗ್ಗೆ ಗಮನ ಹರಿಸಬೇಕು. ರಾಮನ ಹೆಸರಲ್ಲಿ ಸಾವಿರಾರು ಕೋಟಿ ಲೂಟಿ ಮಾಡಿದವರು ಮಂಜುನಾಥ ಸ್ವಾಮಿ ಹೆಸರಲ್ಲಿ ಸತ್ಯ ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಒಗ್ಗಟ್ಟಿನ ಬಗ್ಗೆ ಬಿಜೆಪಿ ಚಿಂತೆ ಬಿಡಲಿ ಎಂದಿದ್ದಾರೆ.

ಬೆಂಗಳೂರು, ಜೂನ್​​ 22: ಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನದ ಬಗ್ಗೆ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕರಿಂದ ಆಣೆ ಪ್ರಮಾಣ ವಿಚಾರ ಸಂಬಂಧ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ವ್ಯಂಗ್ಯವಾಡಿದ್ದಾರೆ. ರಾಮನ ಹೆಸರಲ್ಲೇ ಲೂಟಿ ಮಾಡುವ ಬಿಜೆಪಿಯವರು ಮಂಜುನಾಥಸ್ವಾಮಿ ಹೆಸರಿನಲ್ಲಿ ಸತ್ಯ ಹೇಳ್ತಾರಾ? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಯವರಿಗೆ ಅವರ ಪಕ್ಷವನ್ನು ನೋಡಿಕೊಳ್ಳಲು ಹೇಳಿ. ಬಿಜೆಪಿಯಲ್ಲಿ ಶಿಸ್ತೇ ಇಲ್ಲ, ಅದಕ್ಕೆ ಅಡ್ಡ ಮತದಾನ ಮಾಡಿದ್ದು. ಕಾಂಗ್ರೆಸ್ 100 ಭಾಗವಾದ್ರೂ ಆಗಲಿ, ಅವರಿಗೇನು ಸಮಸ್ಯೆ? ಬಿಜೆಪಿ ಅಧ್ಯಕ್ಷರು ಮಂಜುನಾಥಸ್ವಾಮಿ ಬಳಿ ಹೋಗೋಣ ಅಂತಿದ್ದಾರೆ. ಬೇರೆಯವರು ಬೇಡ ಅಂತಿದ್ದಾರೆ, ಇವರು ಎಷ್ಟು ಭಾಗ ಆಗಿದ್ದಾರೆ? ಎಂದು ಕೇಳಿವ ಮೂಲಕ ಪ್ರಿಯಾಂಕ್​​ ತಿರುಗೇಟು ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More