ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಜೈಲುಗಳಲ್ಲಿ ಮೊಬೈಲ್ ಬಳಕೆ ಮತ್ತು ವಿಐಪಿ ಸೌಲಭ್ಯಗಳ ಆರೋಪಗಳಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಯಲ್ಲಿ ಉತ್ತರ ನೀಡಿದರು. ಮಾಹಿತಿ ಬಂದ ತಕ್ಷಣವೇ ದಾಳಿ ನಡೆಸಿ ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಯಾವುದೇ ಕೈದಿಗೆ ಜೈಲು ಕೈಪಿಡಿ ನಿಯಮಗಳನ್ನು ಮೀರಿ ವಿಶೇಷ ಸೌಲಭ್ಯ ನೀಡಲಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು, ಆಗಸ್ಟ್ 18: ಕರ್ನಾಟಕದ ಕಾರಾಗೃಹಗಳಲ್ಲಿ ಮೊಬೈಲ್ ಬಳಕೆ ಮತ್ತು ವಿಐಪಿ ಸೌಲಭ್ಯಗಳ ಕುರಿತ ಆರೋಪಗಳಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಯಲ್ಲಿ ಉತ್ತರಿಸಿದ್ದಾರೆ. ಶಾಸಕ ಎಸ್.ಟಿ. ಸೋಮಶೇಖರ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ಜೈಲುಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಮಾಹಿತಿ ಬಂದ ಕೂಡಲೇ ಮುಖ್ಯಮಂತ್ರಿಗಳ ಅನುಮತಿ ಪಡೆದು ಕಾರಾಗೃಹಗಳ ಮೇಲೆ ದಾಳಿ ನಡೆಸಲಾಯಿತು. ದಾಳಿ ವೇಳೆ ಕೆಲವು ಕೈದಿಗಳ ಕೊಠಡಿಗಳಲ್ಲಿ ಅಕ್ರಮ ವಸ್ತುಗಳು ಪತ್ತೆಯಾಗಿವೆ. ಜೈಲು ನಿಯಮಗಳ ಪ್ರಕಾರ, ಯಾವುದೇ ಕೈದಿಗೆ ವಿಐಪಿ ಸೌಲಭ್ಯ ನೀಡಲು ಅವಕಾಶವಿಲ್ಲ. ಎಲ್ಲರಿಗೂ ಸಮಾನವಾಗಿ ನಿಯಮಾವಳಿಗಳನ್ನು ಪಾಲಿಸಲಾಗುತ್ತದೆ. ಪತ್ತೆಯಾದ ಮೊಬೈಲ್ ಹಾಗೂ ಇತರ ವಸ್ತುಗಳ ಕುರಿತು ವಿಧಿವಿಜ್ಞಾನ ಪರೀಕ್ಷೆ ನಡೆಯುತ್ತಿದ್ದು, ತನಿಖೆ ಪೂರ್ಣಗೊಂಡ ನಂತರ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಲಾಗುವುದು ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

