“ಇದು ಬರೀ ಟ್ರೇಲರ್‌, ಇನ್ನು ಪಿಕ್ಚರ್‌ ಬಾಕಿ ಇದೆ”: ಕುಮಾರಸ್ವಾಮಿ ವಿರುದ್ಧ ಪಕ್ಕಾ ದಾಖಲೆ ಇದೆ ಎಂದು ಶಾಕಿಂಗ್ ಹೇಳಿಕೆ ನೀಡಿದ ಪ್ರಿಯಾಂಕ್ ಖರ್ಗೆ

Edited By:

Updated on: Nov 01, 2026 | 5:58 PM

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣದಲ್ಲಿ ಕುಮಾರಸ್ವಾಮಿ ಅವರ ಮನೆಯಲ್ಲಿ ಮೊಬೈಲ್ ಎಕ್ಸ್‌ಚೇಂಜ್ ನಡೆದಿದೆ ಎಂದು ಆರೋಪಿ ಹೇಳಿಕೆ ನೀಡಿದ್ದಾನೆ. ಈ ಸಂಬಂಧ ಕುಮಾರಸ್ವಾಮಿ ಅವರ ಆಪ್ತರು ತನಿಖೆಗೆ ಹಾಜರಾಗದೆ ಅಬ್ಸ್ಕಾಂಡ್ ಆಗಿದ್ದಾರೆ. ತನಿಖೆಗೆ ಸಹಕರಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

ಬೆಂಗಳೂರು, ನ.1: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಮನೆಯಲ್ಲಿ ಆರೋಪಿ ಮೊಬೈಲ್ ಎಕ್ಸ್‌ಚೇಂಜ್ ಮಾಡಿದ್ದಾನೆ ಎಂದು ತನಿಖೆ ವೇಳೆ ತಿಳಿದುಬಂದಿದೆ. ಈ ಕುರಿತು ಆರೋಪಿ ತನಿಖಾಧಿಕಾರಿಗಳ ಎದುರು ಹೇಳಿಕೆ ನೀಡಿರುವುದಾಗಿ ಬೆಂಗಳೂರು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಈ ವಿಚಾರವಾಗಿ ಕಲಬುರಗಿಯಲ್ಲಿ ಪ್ರತಿಕ್ರಿಯಿಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, “ನಾನು ಮೊದಲಿನಿಂದಲೂ ಹೇಳುತ್ತಿದ್ದೆ, ಪ್ರತಿಯೊಬ್ಬರೂ ತಮ್ಮ ಹುದ್ದೆಯ ಘನತೆಯನ್ನು ಕಾಪಾಡಿಕೊಳ್ಳಬೇಕು” ಎಂದರು. ವೈಯಕ್ತಿಕ ಟೀಕೆಗಳು ಮತ್ತು ಸಮಾಜದ ಮೇಲೆ ಹಲ್ಲೆ ನಡೆಯುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. “ತಾಂತ್ರಿಕವಾಗಿ ತನಿಖೆ ನಡೆಸಿದ ನಂತರ ಕೆಲವು ಅಂಶಗಳು ಹೊರಬಂದಿವೆ. ಕುಮಾರಸ್ವಾಮಿ ಅವರು ಈ ಹಿಂದೆ ತನಿಖೆಯ ಬಗ್ಗೆ ಪ್ರಶ್ನಿಸಿ ಪೊಲೀಸ್ ಮತ್ತು ಡಿಜಿ ಕಚೇರಿಗಳಿಗೆ ಮುತ್ತಿಗೆ ಹಾಕಿದ್ದರು. ಆದರೆ ಈಗ ಅವರ ಜನರ ಹೆಸರು ಬಂದಾಗ ಅವರು ತನಿಖೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದಾರೆ” ಎಂದು ಖರ್ಗೆ ಆರೋಪಿಸಿದರು. ತನಿಖೆಗೆ ಸಹಕರಿಸುವಂತೆ ಅವರು ಕುಮಾರಸ್ವಾಮಿ ಆಪ್ತರಿಗೆ ಮನವಿ ಮಾಡಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More