ಆಳಂದ ಕ್ಷೇತ್ರದಲ್ಲಿ ಮತಗಳ್ಳತನ: ರಾಹುಲ್ ಬೆನ್ನಲ್ಲೇ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಕಲಬುರುಗಿಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಕಾಂಗ್ರೆಸ್ ಮತದಾರರನ್ನೇ ಟಾರ್ಗೆಟ್ ಮಾಡಲಾಗಿದೆ ಎಂದಿದ್ದಾರೆ. ಇದರ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಮತ ಡಿಲೀಟ್ ಮಾಡಲು ಅರ್ಜಿ ಸಲ್ಲಿಸಿದ 6018 ಮತದಾರರಲ್ಲಿ ಕೇವಲ 28 ಮತದಾರರಿಗೆ ಮಾತ್ರ ಡಿಲೀಶನ್ನ ಮಾಹಿತಿ ಇದೆ ಎಂದಿದ್ದಾರೆ. ಈ ಕುರಿತ ವೀಡಿಯೊ ನೋಡಿ
ಕಲಬುರುಗಿ, ಸೆಪ್ಟೆಂಬರ್ 18: ಕರ್ನಾಟಕದ ಕಲಬುರುಗಿಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅದರಲ್ಲಿಯೂ ಕಾಂಗ್ರೆಸ್ ಮತದಾರರನ್ನೇ ಟಾರ್ಗೆಟ್ ಮಾಡಲಾಗಿದೆ ಎಂದಿದ್ದಾರೆ. ಇದರ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿದ್ದು, 2023 ರ ಚುನಾವಣೆಗೂ ಮುಂಚೆ ಆಳಂದದ 7250 ಮತಗಳು ಮತದಾರರಿಗೆ ಗೊತ್ತಾಗದಂತೆ ಡಿಲೀಟ್ ಮಾಡಿರುವುದು ತಿಳಿದು ಬಂದಿದೆ. ಇದು ನಮ್ಮ ಗಮನಕ್ಕೆ ಬಂದ ಕೂಡಲೆ ನಾನು ಮತ್ತು ಶಾಸಕ ಬಿ. ಆರ್ ಪಾಟೀಲರು ಚುನಾವಣಾ ಆಯೋಗಕ್ಕೆ ದೂರನ್ನು ನೀಡಿದೆವು. ಮತ ಅಳಿಸುವಿಕೆಗೆ ಅರ್ಜಿ ಹಾಕಿದ 6018 ಮತದಾರರ ಬಗ್ಗೆ ಪರಿಶೀಲಿಸಿದಾಗ ಅದರಲ್ಲಿ ಕೇವಲ 28 ಮತದಾರರಿಗೆ ಮಾತ್ರ ಇದರ ಬಗ್ಗೆ ಮಾಹಿತಿ ಇತ್ತು. ಉಳಿದ ಮತದಾರರಿಗೆ ಈ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಈ ಕುರಿತು ರಾಜ್ಯ ಚುನಾವಣಾ ಆಯೋಗಕ್ಕೆ CID ಬರೆದ ಪತ್ರಕ್ಕೆ ಸರಿಯಾದ ಮಾಹಿತಿ ಕೊಟ್ಟಿಲ್ಲಎಂದಿದ್ದಾರೆ.

