ಬಿಜೆಪಿಯ ಯಾವೆಲ್ಲ ಶಾಸಕರು ನನಗೆ ಆಮಿಷವೊಡ್ಡಿದ್ದರು ಗೊತ್ತಾ? ಸಚಿವ ಪ್ರಿಯಾಂಕ್ ಖರ್ಗೆ ಹೀಗೆಂದಿದ್ದೇಕೆ ನೋಡಿ

Updated on: Jul 21, 2025 | 10:05 AM

ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಶಾಸಕರು ತಮಗೆ ಅನುದಾನದ ವಿಷಯದಲ್ಲಿ ಆಮಿಷವೊಡ್ಡಿದ್ದರು ಎಂದು ಆರೋಪಿಸಿದ್ದಾರೆ. ಬಿಜೆಪಿ ನಾಯಕರು ಅವರ ಆಡಳಿತ ಕಾಲದಲ್ಲಿ 280 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಸ್ಥಗಿತಗೊಳಿಸಿದ್ದಾರೆ ಎಂದೂ ಅವರು ಆರೋಪಿಸಿದ್ದಾರೆ. ಅಲ್ಲದೆ, ಕೆಲವು ಬಿಜೆಪಿ ಶಾಸಕರು ಸದನದಲ್ಲಿಯೇ ಅವರನ್ನು ಭೇಟಿ ಮಾಡಿ ಹಣದ ಆಮಿಷವೊಡ್ಡಿದ್ದರು ಎಂದು ಹೇಳಿದ್ದಾರೆ.

ಬೆಂಗಳೂರು, ಜುಲೈ 21: ಬಿಜೆಪಿಯ ಅನೇಕ ಶಾಸಕರು ತಮಗೆ ಆಮಿಷವೊಡ್ಡಿದ್ದರು ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಅನುದಾನ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ತಮ್ಮ ಕ್ಷೇತ್ರಕ್ಕೆ ಮಂಜೂರಾದ 280 ಕೋಟಿ ರೂಪಾಯಿಗಳ ಯೋಜನೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಅಷ್ಟೇ ಅಲ್ಲದೆ, ಬಿಜೆಪಿ ಶಾಸಕರು ತಮಗೆ ಆಮಿಷವೊಡ್ಡಿದ್ದರು ಎಂದಿದ್ದಾರೆ. ಹಾಗಾದರೆ, ಆಮಿಷವೊಡ್ಡಿದ್ದು ಯಾಕೆ? ಪ್ರಿಯಾಂಕ್ ಖರ್ಗೆ ಹೇಳಿದ್ದೇನು? ವಿವರಗಳಿಗೆ ವಿಡಿಯೋ ನೋಡಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 21, 2025 10:05 AM