ಡಿಕೆ ಶಿವಕುಮಾರ್ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

Updated on: Dec 05, 2025 | 12:32 PM

ಕರ್ನಾಟಕ ರಾಜಕಾರಣದಲ್ಲಿ, ಅದರಲ್ಲೂ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟು ಕೊನೆಯಾಯಿತು ಎನ್ನುವಷ್ಟರಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ಸುಮಾರು ಒಂದು ಗಂಟೆಗಳ ಕಾಲ ಸುಧೀರ್ಘ ಮಾತುಕತೆ ನಡೆಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರು, ಡಿಸೆಂಬರ್ 5: ಕರ್ನಾಟಕ ಕಾಂಗ್ರೆಸ್​​ನಲ್ಲಿ ಎದ್ದಿದ್ದ ‘ಅಧಿಕಾರ ಹಂಚಿಕೆ’ ಬಿರುಗಾಳಿ ತುಸು ತಣ್ಣಗಾಗಿರುವ ಸಂದರ್ಭದಲ್ಲೇ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ಡಿಸಿಎಂ ಡಿಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ಸುಮಾರು ಒಂದು ತಾಸು ಮಾತುಕತೆ ನಡೆಸಿದ್ದಾರೆ. ಆದರೆ, ಡಿಕೆಶಿ ಜೊತೆಗಿನ ಚರ್ಚೆಯ ಗುಟ್ಟನ್ನು ಪ್ರಿಯಾಂಕ್ ಖರ್ಗೆ ಬಿಟ್ಟು‌ಕೊಟ್ಟಿಲ್ಲ. ಇದು ಕುತೂಹಲಕ್ಕೆ ಕಾರಣವಾಗಿದೆ. ಇದಕ್ಕೂ ಮುನ್ನ ಸತೀಶ್ ಜಾರಕಿಹೊಳಿ ಹಾಗೂ ಡಿಕೆ ಶಿವಕುಮಾರ್ ಮಾತುಕತೆ ನಡೆಸಿದ್ದು ಚರ್ಚೆಗೆ ಗ್ರಾಸವಾಗಿದೆ. ಆದರೆ, ಮದುವೆಗೆ ಬಂದಿದ್ದ ಸಂದರ್ಭದಲ್ಲಿ ಡಿಸಿಎಂ ಅವರನ್ನು ಭೇಟಿಯಾದೆ ಅಷ್ಟೆ ಎಂದು ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 05, 2025 12:30 PM