RSS ಬಗ್ಗೆ ಮತ್ತೆ ಪ್ರಿಯಾಂಕ್ ಖರ್ಗೆ​​ ಕಿಡಿ: ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಗೃಹ ಸಚಿವ

Edited By:

Updated on: Jun 28, 2026 | 12:31 PM

ಮುಖ್ಯಾಂಶಗಳು

  • RSS ನೋಂದಣಿ ಬಗ್ಗೆ ಮತ್ತೆ ಮಾತಾಡಿದ ಪ್ರಿಯಾಂಕ್​​ ಖರ್ಗೆ
  • 'ವಿಶ್ವದ ಅತಿ ದೊಡ್ಡ ಸಂಸ್ಥೆಯ ನೋಂದಣಿ ಬಗ್ಗೆ ಕೇಳಬಾರ್ದಾ?'
  • ನೋಂದಣಿಯ ಶುಲ್ಕ ಬೇಕಿದ್ದರೆ ಕೊಡುತ್ತೇನೆ: ಗೃಹ ಸಚಿವ

ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ತನ್ನ ಚಟುವಟಿಕೆಗಳಿಗೆ ನೋಂದಣಿ ಮಾಡಿಸಿಕೊಳ್ಳಬೇಕೆಂದು ಮತ್ತೆ ಪುನರುಚ್ಛರಿಸಿರುವ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ, ನೋಂದಣಿಗೆ ಬೇಕಾದ ಎಲ್ಲ ಸಹಕಾರವನ್ನು ತಾವೇ ನೀಡುವುದಾಗಿ ಹೇಳಿದ್ದಾರೆ. ವಿಶ್ವದ ಅತಿ ದೊಡ್ಡ ಸಂಸ್ಥೆ ಆರ್‌ಎಸ್‌ಎಸ್‌ ಏಕೆ ನೋಂದಣಿ ಆಗಿಲ್ಲಎಂದು ಕೇಳೋದೇ ತಪ್ಪಾ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು, ಜೂನ್​​ 28: RSSನವರು ನಮ್ಮ ಮಾತು, ನಿಮ್ಮ ಮಾತು, ಸಂವಿಧಾನದ ಮಾತು ಕೇಳಲ್ಲ. ಆದರೆ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಗಳೇ RSS ನೋಂದಣಿ ಆಗಲಿ ಅಂದಿದ್ದಾರೆ. ಧರ್ಮಗುರುಗಳ ಮಾತಾದ್ರೂ ಕೇಳಲಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ವಿಶ್ವದ ಅತಿ ದೊಡ್ಡ ಸಂಸ್ಥೆ ಆರ್‌ಎಸ್‌ಎಸ್‌ ಏಕೆ ನೋಂದಣಿ ಆಗಿಲ್ಲಎಂದು ಕೇಳೋದೇ ತಪ್ಪಾ? ಅತಿ ದೊಡ್ಡ ಸಂಸ್ಥೆ ಆರ್​ಎಸ್​ಎಸ್ ದೊಡ್ಡ ಕಾರ್ಯಕ್ರಮಗಳನ್ನು ಮಾಡುತ್ತೆ. ಅಷ್ಟೊಂದು ಜನ ಬೀದಿಗೆ ಇಳಿಯುತ್ತಾರೆ. ಹೀಗಾಗಿ ನೋಂದಣಿ ಮಾಡಿಸಿಕೊಳ್ಳಿ ಎಂದಿದ್ದೇನೆ. ನೀವು ಯಾರ ಬಳಿಯೂ ಕೈಚಾಚುವುದು ಬೇಡ, ಶುಲ್ಕ ಏನಿದೆಯೋ ಅದನ್ನೂ ಬೇಕಿದ್ದರೆ ನಾನೇ ಕಟ್ಟುತ್ತೇನೆ ಎಂದವರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More