AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ: ಸಂವಾದದಲ್ಲಿ ಭಾಗಿಯಾಗಲಿರುವ ಪ್ರಿಯಾಂಕ್ ಖರ್ಗೆ

ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ: ಸಂವಾದದಲ್ಲಿ ಭಾಗಿಯಾಗಲಿರುವ ಪ್ರಿಯಾಂಕ್ ಖರ್ಗೆ

ಹರೀಶ್ ಜಿ.ಆರ್​.
| Edited By: |

Updated on: Jul 28, 2026 | 12:23 PM

Share

ಆರ್‌ಎಸ್‌ಎಸ್‌ ನೋಂದಣಿ ಅಭಿಯಾನವು ರಾಷ್ಟ್ರಮಟ್ಟದಲ್ಲಿ ಚುರುಕುಗೊಂಡಿದೆ. ಇದರ ಭಾಗವಾಗಿ, ದೆಹಲಿಯ ಸುರ್ಜಿತ್ ಭವನದಲ್ಲಿ ಸಮಾಜವಾದಿ ಸಂಗಮ್ ವತಿಯಿಂದ "ಆರ್‌ಎಸ್‌ಎಸ್‌ ನೋಂದಣಿ ಯಾಕೆ ಅಗತ್ಯ?" ಎಂಬ ಸಂವಾದ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಮತ್ತು ಕಾಂಗ್ರೆಸ್ ನಾಯಕ ಉದಿತ್ ರಾಜ್ ಸೇರಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಆರ್‌ಎಸ್‌ಎಸ್‌ ಹಣಕಾಸು ಮೂಲಗಳ ಕುರಿತು ಚರ್ಚಿಸಲಿದ್ದಾರೆ.

ಬೆಂಗಳೂರು/ದೆಹಲಿ, ಜುಲೈ 28: ಆರ್‌ಎಸ್‌ಎಸ್‌ ನೋಂದಣಿಗೆ ಆಗ್ರಹಿಸಿ ರಾಷ್ಟ್ರವ್ಯಾಪಿ ಅಭಿಯಾನವೊಂದು ಚುರುಕುಗೊಂಡಿದೆ. ಈ ಅಭಿಯಾನದ ಭಾಗವಾಗಿ, ದೆಹಲಿಯ ಸುರ್ಜಿತ್ ಭವನದಲ್ಲಿ “ಆರ್‌ಎಸ್‌ಎಸ್‌ ನೋಂದಣಿ ಯಾಕೆ ಅಗತ್ಯ?” ಎಂಬ ವಿಷಯದ ಕುರಿತು ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಮಾಜವಾದಿ ಸಂಗಮ್ ಸಂಸ್ಥೆಯು ಮಧ್ಯಾಹ್ನ 3:30ಕ್ಕೆ ಈ ಸಂವಾದವನ್ನು ಹಮ್ಮಿಕೊಂಡಿದ್ದು, ಕರ್ನಾಟಕದ ಸಚಿವರಾದ ಪ್ರಿಯಾಂಕ್ ಖರ್ಗೆ ಇದರಲ್ಲಿ ಭಾಗವಹಿಸಲಿದ್ದಾರೆ. ಈ ರಾಷ್ಟ್ರೀಯ ಸಮ್ಮೇಳನದಲ್ಲಿ ಆರ್‌ಎಸ್‌ಎಸ್‌ ಸಂಸ್ಥೆಯು ಏಕೆ ನೋಂದಣಿ ಮಾಡಿಕೊಳ್ಳಬೇಕು ಮತ್ತು ಅದರ ಅಗತ್ಯತೆ ಏನು ಎಂಬುದರ ಬಗ್ಗೆ ಪ್ರಮುಖವಾಗಿ ಚರ್ಚೆ ನಡಡೆಯಲಿದೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More