AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯನಾಡ್ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ಪ್ರಚಾರ; ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

ವಯನಾಡ್ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ಪ್ರಚಾರ; ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ

ಸುಷ್ಮಾ ಚಕ್ರೆ
|

Updated on: Oct 28, 2024 | 6:22 PM

Share

ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು (ಅಕ್ಟೋಬರ್ 28) ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ಕಟುವಾದ ವಾಗ್ದಾಳಿ ನಡೆಸುವ ಮೂಲಕ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಉಪಚುನಾವಣೆ ಪ್ರಚಾರವನ್ನು ಪ್ರಾರಂಭಿಸಿದರು. ಈ ವೇಳೆ ವಯನಾಡಿನ ಜನರೊಂದಿಗೆ ಬೆರೆತು, ಮಾತುಕತೆ ನಡೆಸಿದರು.

ವಯನಾಡು: ಕೇರಳದ ವಯನಾಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ಲೋಕಸಭಾ ಉಪಚುನಾವಣೆಗೆ ಪ್ರಚಾರ ಆರಂಭಿಸಿದ್ದಾರೆ. ಈ ವೇಳೆ ವಿವಿಧ ಸಮುದಾಯದ ಜನರ ಯೋಗಕ್ಷೇಮ ವಿಚಾರಿಸಿ, ಮಾತನಾಡಿರುವ ಪ್ರಿಯಾಂಕಾ ಗಾಂಧಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ನಾನು ಚುನಾವಣೆಯಲ್ಲಿ ಗೆದ್ದರೆ ಸಂಸತ್ತಿನಲ್ಲಿ ನಿಮ್ಮ ಧ್ವನಿಯಾಗುತ್ತೇನೆ. ನ್ಯಾಯ, ಸಮಾನತೆ ಮತ್ತು ಇಲ್ಲಿನ ಪ್ರತಿಯೊಬ್ಬ ರೈತ, ಮಹಿಳೆಯರು, ಕುಟುಂಬ ಮತ್ತು ಯುವಕರ ಹಕ್ಕುಗಳಿಗಾಗಿ ಹೋರಾಡುತ್ತೇನೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More