AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಮೊಕ್ಕಾಂ: 2 ದಿನಗಳಿಂದ ಹಿರಿಯ ಕಾಂಗ್ರೆಸ್ ನಾಯಕನ ಪುತ್ರನ ಜೊತೆ ಸಿಟಿ ರೌಂಡ್ಸ್

ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಮೊಕ್ಕಾಂ: 2 ದಿನಗಳಿಂದ ಹಿರಿಯ ಕಾಂಗ್ರೆಸ್ ನಾಯಕನ ಪುತ್ರನ ಜೊತೆ ಸಿಟಿ ರೌಂಡ್ಸ್

Pramod Shastri G
| Edited By: |

Updated on: Feb 26, 2026 | 9:57 PM

Share

ಸಂಸದೆ ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್ ವಾದ್ರ ಬೆಂಗಳೂರಿನಲ್ಲಿ ಮೊಕ್ಕಾಂ ಹೂಡಿದ್ದು, ಕಳೆದ ಎರಡು ದಿನಗಳಿಂದ ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕನ ಪುತ್ರನ ಜೊತೆ ಸಿಟಿ ರೌಂಡ್ಸ್ ಹೊಡೆಯುತ್ತಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸಿರುವ ರಾಬರ್ಟ್ ವಾದ್ರಾ, ನಿನ್ನೆ (ಫೆಬ್ರವರಿ 25) ಇಸ್ಕಾನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ರಂಜಾನ್ ಮಾಸ ನಿಮಿತ್ತ ಬೆಂಗಳೂರಿನ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ಖಾಸಗಿ ಹೊಟೆಲ್ ನಲ್ಲಿ ಹಿರಿಯ ನಾಯಕನ ಜೊತೆ ಮಾತುಕತೆ ನಡೆಸಿದ್ದರು. ಇನ್ನು ಕೆಲ ಹಿರಿಯ ನಾಯಕರು ಭೇಟಿಗೆ ಸಮಯ ಕೇಳಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದ್ದು, ಇದು ಕಾಂಗ್ರೆಸ್ ಮನೆಯಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು, (ಫೆಬ್ರವರಿ 26): ಸಂಸದೆ ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್ ವಾದ್ರ (Robert Vadra) ಬೆಂಗಳೂರಿನಲ್ಲಿ (Bengaluru) ಮೊಕ್ಕಾಂ ಹೂಡಿದ್ದು, ಕಳೆದ ಎರಡು ದಿನಗಳಿಂದ ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕನ ಪುತ್ರನ ಜೊತೆ ಸಿಟಿ ರೌಂಡ್ಸ್ ಹೊಡೆಯುತ್ತಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸಿರುವ ರಾಬರ್ಟ್ ವಾದ್ರಾ, ನಿನ್ನೆ (ಫೆಬ್ರವರಿ 25) ಇಸ್ಕಾನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ರಂಜಾನ್ ಮಾಸ ನಿಮಿತ್ತ ಬೆಂಗಳೂರಿನ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ಖಾಸಗಿ ಹೊಟೆಲ್ ನಲ್ಲಿ ಹಿರಿಯ ನಾಯಕನ ಜೊತೆ ಮಾತುಕತೆ ನಡೆಸಿದ್ದರು. ಇನ್ನು ಕೆಲ ಹಿರಿಯ ನಾಯಕರು ಭೇಟಿಗೆ ಸಮಯ ಕೇಳಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದ್ದು, ಇದು ಕಾಂಗ್ರೆಸ್ ಮನೆಯಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಅಧಿಕಾರಿ ಹಂಚಿಕ ಮುಸುಕಿನ ಗುದ್ದಾಟದ ನಡುವೆ ರಾಬರ್ಟ್ ವಾದ್ರಾ ನಿಗೂಢವಾಗಿ ಬೆಂಗಳೂರಿಗೆ ಬಂದು ಕೆಲ ನಾಯಕರ ಜೊತೆ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us