ಪ್ರಿಯಾಂಕಾ ಗಾಂಧಿ ಕೈಯಲ್ಲಿ ಪೊರಕೆ! ರೂಮನ್ನು ಕ್ಲೀನ್ ಮಾಡಿದ ಪರಿ ಹೇಗಿತ್ತು ನೀವೇ ನೋಡಿ

Edited By:

Updated on: Oct 04, 2021 | 1:45 PM

ಉತ್ತರ ಪ್ರದೇಶ ಲಖೀಂಪುರದಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿ 8 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬಸ್ಥರನ್ನು ಭೇಟಿ ಮಾಡುವ ಸಲುವಾಗಿ ಪ್ರಿಯಾಂಕಾ ಗಾಂಧಿ ಲಕ್ನೋಗೆ ಬಂದಿದ್ದರು. ಲಖೀಂಪುರ್ ಕೇರಿಗೆ ತೆರಳುತ್ತಿದ್ದಾಗ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಉತ್ತರ ಪ್ರದೇಶದ ಲಖೀಂಪುರ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದ ಸ್ಥಳಕ್ಕೆ ಹೋಗುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಅಡ್ಡಗಟ್ಟಿದ್ದ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದರು. ಉತ್ತರ ಪ್ರದೇಶದ ಸೀತಾಪುರದ ಪಿಎಸಿ ಗೆಸ್ಟ್ ಹೌಸ್​ನಲ್ಲಿರುವ ಪ್ರಿಯಾಂಕಾ ಗಾಂಧಿ ತಮ್ಮ ಕೊಠಡಿಯನ್ನು ಖುದ್ದು ತಾವೇ ಪೊರಕೆ ಹಿಡಿದು ಕಸ ಗುಡಿಸಿರುವ ವಿಡಿಯೋ ವೈರಲ್ ಆಗಿದೆ. ಪೊಲೀಸರ ವಶದಲ್ಲಿರುವ ಪ್ರಿಯಾಂಕಾ ಗಾಂಧಿಗೆ ಗೆಸ್ಟ್​ ಹೌಸ್​ನಲ್ಲಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ತಮ್ಮ ಕೊಠಡಿ ಸ್ವಚ್ಛವಿಲ್ಲದ ಕಾರಣ ಪ್ರಿಯಾಂಕಾ ಗಾಂಧಿ ವಾದ್ರಾ ತಾವೇ ಪೊರಕೆ ಹಿಡಿದು ರೂಮನ್ನು ಕ್ಲೀನ್ ಮಾಡಿದ್ದಾರೆ. ಇದಕ್ಕೂ ಮೊದಲು ಬಂಧನದ ವೇಳೆ ಪ್ರಿಯಾಂಕಾ ಗಾಂಧಿ ಪೊಲೀಸರೊಂದಿಗೆ ಮಾತನಾಡಿದ ವಿಡಿಯೋ ಕೂಡ ವೈರಲ್ ಆಗಿತ್ತು.

ಉತ್ತರ ಪ್ರದೇಶ ಲಖೀಂಪುರದಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿ 8 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬಸ್ಥರನ್ನು ಭೇಟಿ ಮಾಡುವ ಸಲುವಾಗಿ ಪ್ರಿಯಾಂಕಾ ಗಾಂಧಿ ಲಕ್ನೋಗೆ ಬಂದಿದ್ದರು. ಲಖೀಂಪುರ್ ಕೇರಿಗೆ ತೆರಳುತ್ತಿದ್ದಾಗ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ:
Priyanka Gandhi: ಬಂಧನದ ಬಳಿಕ ಪೊರಕೆ ಹಿಡಿದು ಕಸ ಗುಡಿಸಿದ ಪ್ರಿಯಾಂಕಾ ಗಾಂಧಿ; ವೈರಲ್ ವಿಡಿಯೋ ಇಲ್ಲಿದೆ

Priyanka Gandhi: ಉತ್ತರ ಪ್ರದೇಶದ ಹರಗಾಂವ್​ನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಂಧನ

Published on: Oct 04, 2021 01:27 PM
Loading...
Unable to load recommendations.
Follow Us
TV9 Web

TV9 Kannada

Read More