ಕೇರಳದ ಸೀರೆ ತೊಟ್ಟು, ಸಂವಿಧಾನದ ಪುಸ್ತಕ ಹಿಡಿದು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣವಚನ

ಕೇರಳದ ಸೀರೆ ತೊಟ್ಟು, ಸಂವಿಧಾನದ ಪುಸ್ತಕ ಹಿಡಿದು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣವಚನ

ನಯನಾ ರಾಜೀವ್
|

Updated on:Nov 28, 2024 | 11:46 AM

ಪ್ರಿಯಾಂಕಾ ಗಾಂಧಿ ವಾದ್ರಾ ಮೊಟ್ಟ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ಚೊಚ್ಚಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ವಯನಾಡ್​ನ ಸಂಸದೆಯಾಗಿದ್ದಾರೆ. ಪ್ರಿಯಾಂಕಾ ವಾದ್ರಾ ಅವರು ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಂದ ಪ್ರಿಯಾಂಕಾ ಪ್ರಮಾಣ ವಚನ ಸ್ವೀಕರಿಸಿದರು. ಪ್ರಿಯಾಂಕಾ ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದಿದ್ದರು.

ಅವರು ಕೇರಳದ  ಬ್ರೋಕೆಡ್ ಸೀರೆಯನ್ನು ಧರಿಸಿದ್ದರು.ಯಾಂಕಾ ತನ್ನ ತಾಯಿ ಸೋನಿಯಾ ಗಾಂಧಿ, ಸಹೋದರ ರಾಹುಲ್ ಗಾಂಧಿ ಮತ್ತು ಪತಿ ರಾಬರ್ಟ್ ವಾದ್ರಾ ಅವರೊಂದಿಗೆ ಸಂಸತ್ ಭವನವನ್ನು ತಲುಪಿದ್ದಾರೆ.ಅವರ ಮಕ್ಕಳಿಬ್ಬರೂ ಸಂಸತ್​ಗೆ ಆಗಮಿಸಿದ್ದರು. ಇದರೊಂದಿಗೆ ಸಂಸತ್ತಿನಲ್ಲಿ ಗಾಂಧಿ ಕುಟುಂಬದ ಮೂವರು ಸದಸ್ಯರಿದ್ದಾರೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಲೋಕಸಭೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡರೆ, ತಾಯಿ ಸೋನಿಯಾ ಗಾಂಧಿ ರಾಜ್ಯಸಭಾ ಸದಸ್ಯರಾಗಿದ್ದಾರೆ. ಪ್ರಿಯಾಂಕಾ ಪ್ರಮಾಣ ವಚನ ಸ್ವೀಕಾರದ ನಂತರ ಲೋಕಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರ ನಡುವೆ ಗದ್ದಲ ಆರಂಭವಾಯಿತು. ಎಲ್ಲರೂ ಶಾಂತಿ ಕಾಪಾಡುವಂತೆ ಹಾಗೂ ಕಲಾಪ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುವಂತೆ ಸ್ಪೀಕರ್ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇದಾದ ಬಳಿಕ ಲೋಕಸಭೆಯ ಕಲಾಪವನ್ನು ಮುಂದೂಡಲಾಯಿತು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Nov 28, 2024 11:45 AM