ಬಿಗ್​ ಬಾಸ್​ ಬೆಡಗಿ ಪ್ರಿಯಾಂಕಾ ತಿಮ್ಮೇಶ್​ಗೆ ಕೋಮಲ್​ ಜತೆ ನಟಿಸೋ ಅವಕಾಶ

Updated on: Feb 19, 2024 | 2:45 PM

ಕೋಮಲ್​ ಅಭಿನಯದ 25ನೇ ಸಿನಿಮಾ ‘ಕುಟೀರ’ ಸೆಟ್ಟೇರಿದೆ. ಈ ಚಿತ್ರಕ್ಕೆ ನಾಯಕಿಯಾಗಿ ಪ್ರಿಯಾಂಕಾ ತಿಮ್ಮೇಶ್​ ಆಯ್ಕೆ ಆಗಿದ್ದಾರೆ. ಚಿತ್ರದ ಮುಹೂರ್ತ ಸಮಾರಂಭದಲ್ಲಿ ಪ್ರಿಯಾಂಕಾ ತಿಮ್ಮೇಶ್​ ಅವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ‘ಕುಟೀರ’ ಸಿನಿಮಾದಲ್ಲಿ ಪ್ರಿಯಾಂಕಾ ತಿಮ್ಮೇಶ್​ ಅವರ ಪಾತ್ರ ಮಾಡರ್ನ್​ ಆಗಿರಲಿದೆ.

ನಟಿ ಪ್ರಿಯಾಂಕಾ ತಿಮ್ಮೇಶ್​ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ (Bigg Boss Kannada) ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿದ್ದರು. ಈಗ ಅವರು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಹಾಸ್ಯ ನಟ ಕೋಮಲ್​ (Komal Kumar) ಅವರು ಹೀರೋ ಆಗಿ ಅಭಿನಯಿಸುತ್ತಿರುವ 25ನೇ ಸಿನಿಮಾಗೆ ಪ್ರಿಯಾಂಕಾ ತಿಮ್ಮೇಶ್​ ನಾಯಕಿ ಆಗಿದ್ದಾರೆ. ಈ ಸಿನಿಮಾಗೆ ‘ಕುಟೀರ’ ಎಂದು ಹೆಸರು ಇಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಮುಹೂರ್ತ ಸಮಾರಂಭವು ಬೆಂಗಳೂರಿನ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಈ ವೇಳೆ ಪ್ರಿಯಾಂಕಾ ತಿಮ್ಮೇಶ್​ ಮಾತನಾಡಿದರು. ‘ನಾನು ಮೊದಲು ಈ ನಿರ್ಮಾಪಕರನ್ನು ಭೇಟಿ ಮಾಡಿದ್ದು ಬೇರೆ ಸಿನಿಮಾದ ಕಥೆ ಕೇಳಲು. ಆದರೆ ನನಗೆ ಈ ಸಿನಿಮಾದ ಅವಕಾಶ ಸಿಕ್ಕಿತು. ಈ ಸಿನಿಮಾದಲ್ಲಿ ನನಗೆ ಆಂಗ್ಲೋ ಇಂಡಿಯನ್​ ಹುಡುಗಿಯ ಪಾತ್ರ ಇದೆ. ಅಭಿನಯಕ್ಕೆ ತುಂಬ ಪ್ರಾಮುಖ್ಯತೆ ಇರುವಂತಹ ಪಾತ್ರವಿದು. ಕೋಮಲ್​ ಅವರ ಅನೇಕ ಸಿನಿಮಾಗಳನ್ನು ನೋಡಿ ನಾವು ನಕ್ಕು ಎಂಜಾಯ್​ ಮಾಡಿದ್ದೇವೆ. ಈಗ ಅವರ ಸಿನಿಮಾದಲ್ಲಿ ಸಹ-ಕಲಾವಿದೆ ಆಗಿದ್ದಕ್ಕೆ ತುಂಬ ಖುಷಿಯಾಗಿದೆ’ ಎಂದು ಪ್ರಿಯಾಂಕಾ ತಿಮ್ಮೇಶ್ (Priyanka Thimmesh)​ ಹೇಳಿದ್ದಾರೆ. ಈ ಸಿನಿಮಾಗೆ ‘ಕಂಸಾಳೆ ಫಿಲಂಸ್’ ಮೂಲಕ ಮಧು ಮರಿಸ್ವಾಮಿ ಅವರು ಬಂಡವಾಳ ಹೂಡುತ್ತಿದ್ದಾರೆ. ಅನೂಪ್ ಆಂಟೋನಿ ಅವರು ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More