‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಮನದ ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ ಅವರು ನಾಯಕ ನಟಿಯರಾದ ಮಾಲಾಶ್ರೀ, ವಿಜಯಶಾಂತಿ, ರಾಣಿ ಮುಖರ್ಜಿ ಅವರಂತಹ ನಟಿಯರ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪತಿ ಉಪೇಂದ್ರ ಅವರ ಪ್ರಜಾಕೀಯ ಪಕ್ಷಕ್ಕೆ ತಮ್ಮ ಬೆಂಬಲ, ಪತಿಯ ಆರೋಗ್ಯದ ಬಗ್ಗೆ ಹಂಚಿಕೊಂಡಿದ್ದಾರೆ. ಅಲ್ಲದೆ, ತಮ್ಮ ಫಿಟ್‌ನೆಸ್, ಸೌಂದರ್ಯ ಮತ್ತು ದೈನಂದಿನ ಜೀವನಶೈಲಿಯ ಕುರಿತ ಸಲಹೆಗಳನ್ನು ನೀಡಿ, ಆರೋಗ್ಯಕರ ಜೀವನದ ಮಹತ್ವವನ್ನು ತಿಳಿಸಿದ್ದಾರೆ.
ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ ಅವರು ಇತ್ತೀಚೆಗೆ ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ಬಗ್ಗೆ ಕೆಲವು ಮಾಹಿತಿ ನೀಡಿದ್ದಾರೆ. ದಳಪತಿ ವಿಜಯ್ ತಮಿಳು ನಾಡು ಸಿಎಂ ಆದ ಬಳಿಕ ಉಪೇಂದ್ರ ಅವರಿ್ಡ ಪ್ರಜಾಕೀಯ ಪಕ್ಷದ ಕುರಿತು ಆಸಕ್ತಿ ಹೆಚ್ಚಾಯಿತೇ ಎಂದು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ‘ವಿಜಯ್ ಅವರು ಗೆದ್ದ ನಂತರ ಉಪೇಂದ್ರ ಮತ್ತಷ್ಟು ಸಕ್ರಿಯರಾಗಿದ್ದಾರೆ. ಪ್ರಜಾಕೀಯ 50,000ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದೆ. ವಿದೇಶದಿಂದಲೂ ಬೆಂಬಲ ವ್ಯಕ್ತವಾಗುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ನಡೆಯುವ ಚುನಾವಣೆಯಲ್ಲಿ ಉಪೇಂದ್ರ ಅವರು ಸ್ಪರ್ಧಿಸಬೇಕು’ ಎಂದು ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

