‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಮನದ ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ

Updated on: Aug 03, 2026 | 8:37 AM

ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ ಅವರು ನಾಯಕ ನಟಿಯರಾದ ಮಾಲಾಶ್ರೀ, ವಿಜಯಶಾಂತಿ, ರಾಣಿ ಮುಖರ್ಜಿ ಅವರಂತಹ ನಟಿಯರ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪತಿ ಉಪೇಂದ್ರ ಅವರ ಪ್ರಜಾಕೀಯ ಪಕ್ಷಕ್ಕೆ ತಮ್ಮ ಬೆಂಬಲ, ಪತಿಯ ಆರೋಗ್ಯದ ಬಗ್ಗೆ ಹಂಚಿಕೊಂಡಿದ್ದಾರೆ. ಅಲ್ಲದೆ, ತಮ್ಮ ಫಿಟ್‌ನೆಸ್, ಸೌಂದರ್ಯ ಮತ್ತು ದೈನಂದಿನ ಜೀವನಶೈಲಿಯ ಕುರಿತ ಸಲಹೆಗಳನ್ನು ನೀಡಿ, ಆರೋಗ್ಯಕರ ಜೀವನದ ಮಹತ್ವವನ್ನು ತಿಳಿಸಿದ್ದಾರೆ.

ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ ಅವರು ಇತ್ತೀಚೆಗೆ ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ಬಗ್ಗೆ ಕೆಲವು ಮಾಹಿತಿ ನೀಡಿದ್ದಾರೆ. ದಳಪತಿ ವಿಜಯ್ ತಮಿಳು ನಾಡು ಸಿಎಂ ಆದ ಬಳಿಕ ಉಪೇಂದ್ರ ಅವರಿ್ಡ ಪ್ರಜಾಕೀಯ ಪಕ್ಷದ ಕುರಿತು ಆಸಕ್ತಿ ಹೆಚ್ಚಾಯಿತೇ ಎಂದು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ‘ವಿಜಯ್ ಅವರು ಗೆದ್ದ ನಂತರ ಉಪೇಂದ್ರ ಮತ್ತಷ್ಟು ಸಕ್ರಿಯರಾಗಿದ್ದಾರೆ. ಪ್ರಜಾಕೀಯ 50,000ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದೆ. ವಿದೇಶದಿಂದಲೂ ಬೆಂಬಲ ವ್ಯಕ್ತವಾಗುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ನಡೆಯುವ ಚುನಾವಣೆಯಲ್ಲಿ ಉಪೇಂದ್ರ ಅವರು ಸ್ಪರ್ಧಿಸಬೇಕು’ ಎಂದು ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More