ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ನಟಿ ಪ್ರಿಯಾಂಕಾ ಉಪೇಂದ್ರ ಅವರ ಮನೆಯಲ್ಲಿ ಖುಷಿಯ ವಾತಾವರಣ ನಿರ್ಮಾಣ ಆಗಿದೆ. ಉಪೇಂದ್ರ ಅವರು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಪ್ರಿಯಾಂಕಾ ಅವರ ಕೈಯಲ್ಲೂ ಸಿನಿಮಾಗಳಿವೆ. ಈಗ ಮಗ ಆಯುಷ್ ಉಪೇಂದ್ರ ಕೂಡ ಚಿತ್ರರಂಗಕ್ಕೆ ಬರೋಕೆ ರೆಡಿ ಆಗಿದ್ದಾರೆ. ಆ ಬಗ್ಗೆ ಪ್ರಿಯಾಂಕಾ ಮಾತನಾಡಿದ್ದಾರೆ.
ಪ್ರಿಯಾಂಕಾ ಹಾಗೂ ಉಪೇಂದ್ರ ದಂಪತಿ ಮಗ ಆಯುಷ್ ಅವರು ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಪ್ರಿಯಾಂಕಾ ಅವರು ಎಗ್ಸೈಟ್ ಆಗಿದ್ದಾರೆ. ಇತ್ತೀಚೆಗೆ ಅವರು ಸಿನಿಮಾ ಸೆಟ್ಗೆ ಭೇಟಿ ಕೊಟ್ಟು ಮೇಲ್ವಿಚಾರಣೆ ಮಾಡಿದ್ದಾರೆ. ‘ಮಗ ಕಿಂಡರ್ಗಾರ್ಡನ್ ಅಲ್ಲಿ ಸ್ಟೇಜ್ ಮೇಲೆ ಡ್ಯಾನ್ಸ್ ಮಾಡಿದಾಗ ಖುಷಿಯಿಂದ ಕಣ್ಣಿರು ಬರುತ್ತಿತ್ತು. ಈಗ ಅವನು ಹೀರೋ ಆಗುತ್ತಿದ್ದಾನೆ. ಹೀಗಾಗಿ, ಎಮೋಷನಲ್ ಆಗುತ್ತೇನೆ’ ಎಂದು ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
