ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?

Edited By:

Updated on: Aug 03, 2026 | 12:36 PM

ಆಕ್ಷನ್ ದೃಶ್ಯಗಳಲ್ಲಿ ನಟಿಯರು ಎದುರಿಸುವ ಸವಾಲುಗಳು, ಸುರಕ್ಷತೆಯ ಮಹತ್ವ ಮತ್ತು ದೈಹಿಕ ಸಾಮರ್ಥ್ಯದ ಕುರಿತು ಪ್ರಿಯಾಂಕಾ ಉಪೇಂದ್ರ ಮಾತನಾಡಿದ್ದಾರೆ. ರಶ್ಮಿಕಾ ಮಂದಣ್ಣ ಅವರ ಗಾಯದ ಬಗ್ಗೆ ಉಲ್ಲೇಖಿಸುತ್ತಾ, ಚಿತ್ರೀಕರಣದ ವೇಳೆ 200% ಸುರಕ್ಷತೆ ತೆಗೆದುಕೊಳ್ಳುವ ಅಗತ್ಯವಿದೆ ಎಂದರು. ಮಹಿಳೆಯರು ಫಿಟ್‌ನೆಸ್ ಕಾಪಾಡಿಕೊಳ್ಳುವುದು ಮತ್ತು ಒತ್ತಡ ಕಡಿಮೆ ಮಾಡಿಕೊಳ್ಳುವ ಮೂಲಕ ದೀರ್ಘಕಾಲ ಸಕ್ರಿಯವಾಗಿರಬಹುದು ಎಂದು ಸಲಹೆ ನೀಡಿದ್ದಾರೆ.

ನಟಿ ಪ್ರಿಯಾಂಕಾ ಉಪೇಂದ್ರ ತಮ್ಮ ಹೊಸ ಚಿತ್ರ ‘ಡಿಟೆಕ್ಟಿವ್ ತೀಕ್ಷ್ಣ’ ಚಿತ್ರದ ಆ್ಯಕ್ಷನ್ ದೃಶ್ಯಗಳ ಅನುಭವ ಹಂಚಿಕೊಂಡಿದ್ದಾರೆ. ಚಿತ್ರೀಕರಣದ ವೇಳೆ ಸಣ್ಣಪುಟ್ಟ ಗಾಯಗಳು ಸಾಮಾನ್ಯವಾದರೂ, ಸುರಕ್ಷತಾ ಕ್ರಮಗಳಿಂದಾಗಿ ಯಾವುದೇ ದೊಡ್ಡ ಅಪಾಯಗಳು ಸಂಭವಿಸಿಲ್ಲ ಎಂದು ಅವರು ತಿಳಿಸಿದರು. ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಆದ ಗಾಯದ ಬಗ್ಗೆ ಪ್ರಸ್ತಾಪಿಸಿ, ‘ಆ್ಯಕ್ಷನ್ ದೃಶ್ಯಗಳಲ್ಲಿ ನಟಿಸುವಾಗ 200% ಸುರಕ್ಷತೆ ಅತ್ಯಗತ್ಯ’ ಎಂದು ಪ್ರಿಯಾಂಕಾ ಹೇಳಿದರು.

‘ಮಹಿಳಾ ಕಲಾವಿದರಿಗೆ ಆಕ್ಷನ್ ದೃಶ್ಯಗಳು ದೈಹಿಕ ಮತ್ತು ಮಾನಸಿಕವಾಗಿ ಹೆಚ್ಚು ಸವಾಲು ಎನಿಸುತ್ತವೆ. ಡಿಟೆಕ್ಟಿವ್ ಪಾತ್ರಕ್ಕಾಗಿ ನಾನು ವಿಶೇಷ ತರಬೇತಿ ಪಡೆದಿದ್ದೇನೆ. ಪ್ರಿಯಾಂಕಾ ಚೋಪ್ರಾ ಅವರಂತಹ ನಟಿಯರು ಈಗಲೂ ಆ್ಯಕ್ಷನ್ ದೃಶ್ಯಗಳಲ್ಲಿ ಸಕ್ರಿಯರಾಗಿದ್ದಾರೆ. ನಾವೂ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ ದೀರ್ಘಕಾಲ ಸಕ್ರಿಯವಾಗಿರಬಹುದು. ವ್ಯಾಯಾಮ, ಯೋಗ, ಉತ್ತಮ ಆಹಾರ ಮತ್ತು ಒತ್ತಡ ಕಡಿಮೆ ಮಾಡಿಕೊಳ್ಳುವುದು ಪ್ರತಿಯೊಬ್ಬರ ಆರೋಗ್ಯಕ್ಕೆ ಅತಿ ಮುಖ್ಯ’ ಎಂದು ಪ್ರಿಯಾಂಕಾ ಉಪೇಂದ್ರ ಕಿವಿಮಾತು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us