ಕಲಬುರಗಿಯ ಆಳಂದ್ ಪಟ್ಟಣದಲ್ಲಿ ಮಹಾರಾಷ್ಟ್ರದ ಬಸ್ ತಡೆದು ಕಪ್ಪುಮಸಿ ಬಳಿದ ಕನ್ನಡ ಸಂಘಟನೆ ಕಾರ್ಯಕರ್ತರು

ಅರುಣ್​ ಕುಮಾರ್​ ಬೆಳ್ಳಿ

Updated on: Mar 01, 2025 | 6:44 PM

ಬೆಳಗಾವಿ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯ ಸಾರಿಗೆ ಇಲಾಖೆ ಕಾರ್ಯದರ್ಶಿಗಳ ಮಟ್ಟದಲ್ಲಿ ಮಾತುಕತೆ ನಡೆದಿದ್ದು ವಾಹನ ಮತ್ತು ಪ್ರಯಾಣಿಕರ ಸುರಕ್ಷತೆಗೆ ಒತ್ತು ನೀಡಬೇಕು, ಬಸ್ಸುಗಳನ್ನು ನಿಲ್ಲಿಸಿ ಪುಂಡಾಟಿಕೆ ನಡೆಸದಂತೆ ಜಾಗ್ರತೆವಹಿಸಬೇಕೆಂದು ನಿರ್ಣಯಿಸಲಾಗಿದೆ. ಯಾರೋ ಮಾಡಿದ ತಪ್ಪಿಗೆ ಎರಡೂ ರಾಜ್ಯಗಳ ಅಮಾಯಕ ಪ್ರಯಾಣಿಕರು ತೊಂದರೆ ಎದುರಿಸುವ ಪರಸ್ಥಿತಿ ನಿರ್ಮಾಣವಾಗುತ್ತಿದೆ.

ಕಲಬುರಗಿ, ಮಾರ್ಚ್ 01: ಶಿವಸೇನೆ ಮತ್ತು ಎಂಇಎಸ್ ಪುಂಡರು ಮಹಾರಾಷ್ಟ್ರದಲ್ಲಿ ಕರ್ನಾಟಕದ ಸರ್ಕಾರೀ ಬಸ್ಸುಗಳಿಗೆ ಮಾಡುತ್ತಿರುವುದನ್ನು ಕನ್ನಡ ಪರ ಸಂಘಟನೆನಗಳ ಸದಸ್ಯರು ನೆರೆರಾಜ್ಯದ ಬಸ್ಸುಗಳಿಗೆ ಕರ್ನಾಟಕದಲ್ಲಿ ಮಾಡುತ್ತಿದ್ದಾರೆ. ಜಿಲ್ಲೆಯ ಆಳಂದ್ ಪಟ್ಟಣದ ಚೆಕ್​ಪೋಸ್ಟ್ ಒಂದರ ಬಳಿ ಮಹಾರಾಷ್ಟ್ರ ಬಸ್ಸನ್ನು ತಡೆದ ಕನ್ನಡ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರಲ್ಲ್ಲದೆ ಬಸ್ಸಿನ ಮೇಲೆ ಎಲ್ಲೆಲ್ಲಿ ಮರಾಠಿ ಅಕ್ಷರಗಳು ಕಾಣುತ್ತವೆಯೋ ಅಲ್ಲೆಲ್ಲ ಕಪ್ಪು ಮಸಿ ಬಳಿದರು. ಒಬ್ಬ ಕಾರ್ಯಕರ್ತ ಬಸ್ಸನ್ನು ಹತ್ತಿ ಕನ್ನಡ ಬಾವುಟವನ್ನು ಬೀಸಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಕಂಡಕ್ಟರ್ ಮೇಲೆ ಹಲ್ಲೆ, ನಾಲ್ವರನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ: ಮಾರ್ಟಿನ್ ಮಾಬನಿಯಾಂಗ್   

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.