ಹಾಸನ: ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಹೊಸ ಟೋಲ್​ಗೆ ತೀವ್ರ ವಿರೋಧ, ಹೆದ್ದಾರಿ ತಡೆದು ಪ್ರತಿಭಟನೆ

ಹಾಸನ: ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಹೊಸ ಟೋಲ್​ಗೆ ತೀವ್ರ ವಿರೋಧ, ಹೆದ್ದಾರಿ ತಡೆದು ಪ್ರತಿಭಟನೆ

ಮಂಜುನಾಥ ಕೆಬಿ
| Updated By: Ganapathi Sharma

Updated on: Dec 16, 2024 | 11:11 AM

ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಹಾಸನ ಜಿಲ್ಲೆಯ ಚೌಲಗೆರೆ ಗ್ರಾಮದ ಬಳಿ ನಿರ್ಮಾಣವಾಗಿರುವ ಹೊಸ ಟೋಲ್ ಪ್ಲಾಜಾ ವಿರುದ್ಧ ಕನ್ನಡ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ನಿಯಮ ಉಲ್ಲಂಘಿಸಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಸಂಘಟನೆಗಳು ಸೋಮವಾರ ಬೆಳಗ್ಗೆಯೇ ಪ್ರತಿಭಟನೆ ನಡೆಸಿವೆ.

ಹಾಸನ, ಡಿಸೆಂಬರ್ 16: ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚೌಲಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ (ಬೆಂಗಳೂರು ಮಂಗಳೂರು ಹೆದ್ದಾರಿ) ಮತ್ತೊಂದು ಟೋಲ್ ಆರಂಭವಾಗಿದ್ದು, ಇದಕ್ಕೆ ಸ್ಥಳೀಯರು ಹಾಗೂ ವಾಹನ ಸವಾರರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಟೋಲ್ ಸಂಗ್ರಹ ಖಂಡಿಸಿ ಕನ್ನಡ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ರಸ್ತೆ ಸಮರ್ಪಕವಾಗಿ ಇಲ್ಲದಿದ್ದರೂ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಪ್ರತಿ 50ರಿಂದ 60 ಕಿಲೋ ಮೀಟರ್ ಅಂತರದಲ್ಲಿ ಸುಂಕ ವಸೂಲಿ ಕೇಂದ್ರ ಇರಬೇಕು ಎಂಬ ನಿಯಮ ಇದೆ. ಆದರೆ, ಆಲೂರು ತಾಲೂಕಿನ ಚೌಲಗೆರೆ ಗ್ರಾಮದ ಬಳಿಯ ಟೋಲ್‌ಗೂ ಶಾಂತಿಗ್ರಾಮ ಸುಂಕ ವಸೂಲಿ ಕೇಂದ್ರಕ್ಕೂ 30 ಕಿಲೋ ಮೀಟರ್ ಅಷ್ಟೇ ಅಂತರ ಇದೆ. ನಿಯಮ ಮೀರಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಮತ್ತೊಂದು ಟೋಲ್ ಉದ್ಘಾಟನೆಗೆ ಸಜ್ಜು, ಕಾಮಗಾರಿಯೇ ಮುಗಿದಿಲ್ಲ!

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ