AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್

ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್

ಮದನ್​ ಕುಮಾರ್​
|

Updated on: Jun 28, 2026 | 2:17 PM

Share

ಮುಖ್ಯಾಂಶಗಳು

  • ನಿರ್ಮಾಪಕ ಭಾಮಾ ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ ಅಂತ್ಯಕ್ರಿಯೆ.
  • ಕನ್ನಡ ಚಿತ್ರರಂಗದ ಹಲವರು ಬಂದು ಅಂತಿಮ ನಮನ ಸಲ್ಲಿಸಿದ್ದಾರೆ.
  • ಕೊಡಚಾದ್ರಿಯಲ್ಲಿ ಹೃದಯಾಘಾತದಿಂದ ನಿಧನರಾದ ಉಲ್ಲಾಸ್ ಗೌಡ.

ಭಾಮಾ ಹರೀಶ್ ಕುಟುಂಬದಲ್ಲಿ ಶೋಕದ ವಾತಾವರಣ ಮನೆ ಮಾಡಿದೆ. ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ ಶನಿವಾರ (ಜೂ.27) ಕೊಡಚಾದ್ರಿಯಲ್ಲಿ ಹೃದಯಾಘಾತದಿಂದ ನಿಧನರಾದರು. ಇಂದು (ಜೂ.28) ವಿಜಯನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ವೇಳೆ ಭಾಮಾ ಹರೀಶ್ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ನಿರ್ಮಾಪಕ ಭಾಮಾ ಹರೀಶ್ (Bhama Harish) ಅವರ ಕುಟುಂಬದಲ್ಲಿ ಶೋಕದ ವಾತಾವರಣ ಮನೆ ಮಾಡಿದೆ. ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ ಶನಿವಾರ (ಜೂನ್ 27) ಕೊಡಚಾದ್ರಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದು, ಇಂದು (ಜೂನ್ 28) ವಿಜಯನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ವೇಳೆ ಭಾಮಾ ಹರೀಶ್ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಉಲ್ಲಾಸ್ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಪ್ರೇಮ್, ರಕ್ಷಿತಾ ಪ್ರೇಮ್, ಜಯಮಾಲಾ, ಜಗ್ಗೇಶ್, ಸುಂದರ್ ರಾಜ್, ಪ್ರಮೀಳಾ ಜೋಷಾಯ್ ಸೇರಿದಂತೆ ಹಲವು ಕಲಾವಿದರು ಬಂದು ಅಂತಿಮ ನಮನ ಸಲ್ಲಿಸಿದ್ದಾರೆ. ಸುಮನಹಳ್ಳಿಯಲ್ಲಿ ಸಂಜೆ ಉಲ್ಲಾಸ್ ಗೌಡ ಅವರ ಅಂತ್ಯಕ್ರಿಯೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us