ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ನಾನು ಮಾತನಾಡಿದ್ದರಲ್ಲಿ ತಪ್ಪೇ ಇಲ್ಲ ಎಂದ ಕೆ. ಮಂಜು

Updated on: Feb 06, 2026 | 6:44 PM

ಸಿನಿಮಾ ನಿರ್ಮಾಪಕರ ಬಗ್ಗೆ ಚಕ್ರವರ್ತಿ ಚಂದ್ರಚೂಡ್ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದೆ. ಅದಕ್ಕೆ ನಿರ್ಮಾಪಕ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಮಾತಾಡಿದ್ದಾರೆ. ಸುದೀಪ್ ಜತೆ ಚಂದ್ರಚೂಡ್ ಆಪ್ತವಾಗಿದ್ದಾರೆ. ಆ ಕುರಿತು ಕೂಡ ಕೆ. ಮಂಜು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ಸಿನಿಮಾ ನಿರ್ಮಾಪಕರ ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದ್ದು, ಅದಕ್ಕೆ ನಿರ್ಮಾಪಕ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. ಸುದೀಪ್ (Kichcha Sudeep) ಜೊತೆ ಚಂದ್ರಚೂಡ್ ಆಪ್ತವಾಗಿದ್ದಾರೆ. ಆ ಕುರಿತು ಕೂಡ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ‘ಚಂದ್ರಚೂಡ್ ವೈಯಕ್ತಿಕ ವಿಷಯಗಳನ್ನು ನಾವು ಮಾತನಾಡಿಲ್ಲ. ಚಿತ್ರರಂಗದ ಬಗ್ಗೆ ಮಾತ್ರ ಮಾತನಾಡಿದ್ದೇವೆ. ಯಾವ ನಿರ್ಮಾಪಕರು ಕೂಡ ಮೋಸ ಮಾಡಿಲ್ಲ. ಚಿತ್ರರಂಗಕ್ಕೆ ನಿನ್ನ ಕೊಡುಗೆ ಏನಿದೆ? ಸುದೀಪ್ ಕೂಡ ನಿರ್ಮಾಪಕ ಅಲ್ವಾ? ನಿರ್ಮಾಪಕರ ಬಗ್ಗೆ ಚಂದ್ರಚೂಡ್ ಈ ರೀತಿ ಮಾತನಾಡಿದ್ದು ಸುದೀಪ್ ಅವರಿಗೆ ಗೊತ್ತಾದರೆ ಸುಮ್ಮನೆ ಇರುತ್ತಾರಾ? ಆ ಬಗ್ಗೆ ನಾನು ಮಾತನಾಡಿದ್ದರಲ್ಲಿ ತಪ್ಪು ಏನಿದೆ’ ಎಂದು ಕೆ. ಮಂಜು (K Manju) ಅವರು ಪ್ರಶ್ನಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More