ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ; ಏನಿದರ ವಿಶೇಷತೆ?

Updated on: May 26, 2026 | 10:46 PM

ನಿರ್ಮಾಪಕಿ ಲತಾ ಜಯಪ್ರಕಾಶ್ ಅವರು ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಸಂಪೂರ್ಣವಾಗಿ ಎಐ ಮೂಲಕ ಮೂಡಿಬರುತ್ತಿದೆ. ಈ ಬಗ್ಗೆ ಲತಾ ಜಯಪ್ರಕಾಶ್ ಅವರು ಮಾಹಿತಿ ನೀಡಿದ್ದಾರೆ. ಮಕ್ಕಳಿಗಾಗಿ ಅವರು ಈ ಸಿನಿಮಾ ಮಾಡುತ್ತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ನಿರ್ಮಾಪಕಿ ಲತಾ ಜಯಪ್ರಕಾಶ್ ಅವರು ಕಿತ್ತೂರು ರಾಣಿ ಚೆನ್ನಮ್ಮ (Kittur Rani Chennamma) ಕುರಿತು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಸಂಪೂರ್ಣವಾಗಿ ಎಐ ಮೂಲಕ ಮೂಡಿಬರುತ್ತಿದೆ. ಈ ಬಗ್ಗೆ ಲತಾ ಜಯಪ್ರಕಾಶ್ ಅವರು ಮಾಹಿತಿ ನೀಡಿದ್ದಾರೆ. ಮಕ್ಕಳಿಗಾಗಿ ಅವರು ಈ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕನ್ನಡದ ನಟಿಯರ ಮುಖ ಬಳಕೆ ಮಾಡಿಕೊಳ್ಳಬೇಕು ಎಂಬುದು ಚಿತ್ರತಂಡದ ಆಶಯ ಆಗಿತ್ತು. ಆದರೆ ನಟಿಯರು ಹೆಚ್ಚು ಸಂಭಾವನೆ ಕೇಳಿದ್ದರಿಂದ ಅದು ಸಾಧ್ಯವಾಗಲಿಲ್ಲ. ಚೆನ್ನೈ, ಮುಂಬೈನಿಂದ ಅತ್ಯುತ್ತಮ ಎಐ (AI) ತಂತ್ರಜ್ಞರನ್ನು ಕರೆಸಿ ಈ ಸಿನಿಮಾ ಮಾಡಿಸಲಾಗುತ್ತಿದೆ. ಕೋಟ್ಯಂತರ ರೂಪಾಯಿ ಬಂಡವಾಳ ಹಾಕಿ ಈ ಸಿನಿಮಾ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಶ್ವೇತಾ ಶೆಟ್ಟಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ‘ಇದು ಒಂದು ರೀತಿಯ ಪ್ರಯೋಗಾತ್ಮಕ ಸಿನಿಮಾ. ನಮ್ಮ ಎರಡನೇ ನಿರ್ಮಾಣದ ಸಿನಿಮಾ ಇದು. ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಸಿನಿಮಾ ಮಾಡುತ್ತಿರುವುದು ನಮ್ಮ ಹೆಗ್ಗಳಿಕೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More