‘ಕಾಟೇರ’ ಕಲೆಕ್ಷನ್ ಬಗ್ಗೆ ಕೇಳಿದ್ದಕ್ಕೆ ನಿರ್ಮಾಪಕ ರಾಕ್‌ಲೈನ್ ನೀಡಿದ್ರು ಡಿಫರೆಂಟ್ ಉತ್ತರ

Edited By:

Updated on: Jan 01, 2024 | 9:28 PM

ರಾಜ್ಯಾದ್ಯಂತ ಕಾಟೇರ ಸಿನಿಮಾ ಧೂಳೆಬ್ಬಿಸುತ್ತಿದೆ. ಮೂರು ದಿನಕ್ಕೆ ಈ ಚಿತ್ರ 58 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ ಎಂದು ಹೇಳಲಾಗುತ್ತಿದೆ‌. ಆ ಕುರಿತ ಪ್ರಶ್ನೆಗೆ ರಾಕ್‌ಲೈನ್ ವೆಂಕಟೇಶ್ ಪ್ರತಿಕ್ರಿಯೆ ನೀಡಿದ್ದಾರೆ.

ದರ್ಶನ್ ಅಭಿಮಾನಿಗಳು ‘ಕಾಟೇರ’ (Kaatera) ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಅನೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಅದೇ ಖುಷಿಯಲ್ಲಿ ‘ಕಾಟೇರ’ ಚಿತ್ರತಂಡದವರು ಸಕ್ಸಸ್ ಮೀಟ್ ಮಾಡಿದ್ದಾರೆ. ಈ ವೇಳೆ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ (Rockline Venkatesh) ಅವರಿಗೆ ‘ಕಾಟೇರ’ ಚಿತ್ರದ ಕಲೆಕ್ಷನ್ (Kaatera Movie collection) ಬಗ್ಗೆ ಕೇಳಲಾಯಿತು. ‘ನನ್ನ ಸಿನಿಮಾಗಳ ಬಜೆಟ್, ಲಾಭ, ನಷ್ಟದ ಬಗ್ಗೆ ನಾನು ಯಾರೊಂದಿಗೂ ಮಾತಾಡಲ್ಲ. ‘ಕಾಟೇರ’ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡಿದೆ ಅಂತ ನೀವೇ ಬರೆಯುತ್ತಿದ್ದೀರಿ. ಹಾಗೇ ಆಗಲಿ ಅಂತ ಭಗವಂತನಲ್ಲಿ ಪ್ರಾರ್ಥನೆ ಮಾಡಿಕೊಂಡು ಸುಮ್ಮನೆ ಇದ್ದೇನೆ. ಚೆನ್ನಾಗಿ ಕಲೆಕ್ಷನ್ ಆಗುತ್ತಿದೆ. ನಾನು ಲೆಕ್ಕ ನೋಡೋಕೆ ಹೋಗಿಲ್ಲ. ಅದನ್ನು ಕೊನೆಯಲ್ಲಿ ಮಾಡ್ತೀನಿ.‌ ಆಮೇಲೆ ಹೇಳ್ತೀನಿ’ ಎಂದು ರಾಕ್‌ಲೈನ್ ವೆಂಕಟೇಶ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More