ಬೊಮ್ಮನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆ ಸ್ಪರ್ಧಿಸಿದ್ದ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ (Umapathi Shrinivas Gowda) ಸೋಲನುಭವಿಸಿದ್ದಾರೆ. ಆದರೆ ಸೋಲಿನ ಕಹಿಯಿಂದ ಒಂದೇ ದಿನಕ್ಕೆ ಹೊರಬಂದಿರುವ ಉಮಾಪತಿ ಶ್ರೀನಿವಾಸ್ ಗೌಡ ಇದೀಗ ಡಿಕೆ ಶಿವಕುಮಾರ್ ಪರ ಧ್ವನಿ ಎತ್ತಿದ್ದು, ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ಒಕ್ಕಲಿಗರ ಸಂಘದ ಸದಸ್ಯರೂ ಆಗಿರುವ ಉಮಾಪತಿ ಶ್ರೀನಿವಾಸ್ ಗೌಡ, ಡಿಕೆಶಿ ಸಿಎಂ ಆಗಬೇಕು ಎಂಬುದು ನಮ್ಮ ಸಂಘದ, ಸಮುದಾಯದ ಒತ್ತಾಯ ಎಂದಿದ್ದಾರೆ. ಎಲ್ಲದರ ಜೊತೆಗೆ ಡಿಕೆಶಿಯವರು ಸಿಎಂ ಸ್ಥಾನಕ್ಕೆ ಅರ್ಹ ವ್ಯಕ್ತಿ ಎಂದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ