ಸೆಂಟ್ರಲ್ ಜೈಲಿನ ಬಳಿ ನಿಷಿದ್ಧ ವಸ್ತುಗಳು ಪತ್ತೆ: ಕೈದಿಗಳಿಗೆ ತಲುಪಿಸುವ ಯತ್ನ ವಿಫಲ

Edited By:

Updated on: Nov 17, 2026 | 7:05 AM

ಶಿವಮೊಗ್ಗ ಕೇಂದ್ರ ಕಾರಾಗೃಹದ ಆವರಣದ ಬಳಿ ನಿಷೇಧಿತ ವಸ್ತುಗಳಾದ ಮೊಬೈಲ್ ಫೋನ್‌ಗಳು, ಬ್ಯಾಟರಿಗಳು, ಸಿಗರೇಟ್‌ಗಳು ಪತ್ತೆಯಾಗಿವೆ. ಕೈದಿಗಳಿಗೆ ತಲುಪಿಸಲು ಕಪ್ಪು ಟೇಪ್‌ನಲ್ಲಿ ಸುತ್ತಿ ಇಡಲಾಗಿದ್ದ ಈ ವಸ್ತುಗಳನ್ನು ಕೆಎಸ್ಐಎಸ್ಎಫ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ, ನವೆಂಬರ್ 17: ಶಿವಮೊಗ್ಗದ ಕೇಂದ್ರ ಕಾರಾಗೃಹದ ಆವರಣದ ಬಳಿ ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಜೈಲಿನೊಳಗೆ ಕೈದಿಗಳಿಗೆ ತಲುಪಿಸುವ ಉದ್ದೇಶದಿಂದ ತಂದಿರಿಸಲಾಗಿದ್ದ ಮೊಬೈಲ್ ಫೋನ್‌ಗಳು ಮತ್ತು ಸಿಗರೇಟ್‌ಗಳನ್ನು ಜೈಲು ಅಧಿಕಾರಿಗಳು ಮತ್ತು ಕೆಎಸ್ಐಎಸ್ಎಫ್ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಕೆಎಸ್ಐಎಸ್ಎಫ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ, ಎರಡು ಅನುಮಾನಾಸ್ಪದ ಪೊಟ್ಟಣಗಳು ಸಿಕ್ಕಿವೆ. ಪೊಟ್ಟಣಗಳನ್ನು ಪರಿಶೀಲಿಸಿದಾಗ, ಕಪ್ಪು ಟೇಪ್‌ನಿಂದ ಸುತ್ತಿಡಲಾದ ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ವಶಪಡಿಸಿಕೊಂಡ ವಸ್ತುಗಳಲ್ಲಿ ಒಂದು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್, ನಾಲ್ಕು ಸಾಮಾನ್ಯ ಮೊಬೈಲ್ ಫೋನ್‌ಗಳು, ಮೊಬೈಲ್ ಬ್ಯಾಟರಿಗಳು, ಚಾರ್ಜರ್‌ಗಳು ಮತ್ತು ಹೆಡ್‌ಫೋನ್‌ಗಳು ಸೇರಿವೆ. ಇದರ ಜೊತೆಗೆ, ಸಿಗರೇಟ್‌ಗಳು ಮತ್ತು ಬಿಡಿ ಪ್ಯಾಕೆಟ್‌ಗಳು ಸಹ ಪತ್ತೆಯಾಗಿವೆ.

ಈ ವಸ್ತುಗಳನ್ನು ಕೈದಿಗಳಿಗೆ ತಲುಪಿಸುವುದಕ್ಕಾಗಿ ತಂದಿಡಲಾಗಿತ್ತು ಎಂದು ಶಂಕಿಸಲಾಗಿದೆ. ಈ ಬಗ್ಗೆ ತಕ್ಷಣ ಕ್ರಮ ಕೈಗೊಂಡಿದ್ದು, ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಧಿಕಾರಿಗಳು ಈ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More