ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಗಂಡು ಮಕ್ಕಳು: ದಾರುಣ ಘಟನೆಗೆ ಸಾಕ್ಷಿಯಾದ ಬೆಂಗಳೂರಿನ ದೂಪನಹಳ್ಳಿ

Edited By:

Updated on: Feb 17, 2026 | 10:23 AM

ಬೆಂಗಳೂರಿನ ಇಂದಿರಾನಗರದ ದೂಪನಹಳ್ಳಿಯಲ್ಲಿ ಆಸ್ತಿ ವಿವಾದ ಸಂಬಂಧ 70 ವರ್ಷದ ನಿವೃತ್ತ ಕಂಡಕ್ಟರ್ ಮುನಿಕೃಷ್ಣಪ್ಪ ಅವರನ್ನು ಅವರ ಪುತ್ರರೇ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ. ಗಂಭೀರ ಗಾಯಗೊಂಡಿದ್ದ ಮುನಿಕೃಷ್ಣಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರ ಮೋಹನ್ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು, ಫೆಬ್ರವರಿ 17: ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೂಪನಹಳ್ಳಿಯಲ್ಲಿ ಆಸ್ತಿ ವಿವಾದವೊಂದು ವೃದ್ಧರೊಬ್ಬರs ಸಾವಿಗೆ ಕಾರಣವಾಗಿದೆ. ಬಿಎಂಟಿಸಿಯ ನಿವೃತ್ತ ಕಂಡಕ್ಟರ್ 70 ವರ್ಷದ ಮುನಿಕೃಷ್ಣಪ್ಪ ಅವರನ್ನು ಅವರ ಇಬ್ಬರು ಮಕ್ಕಳೇ ಆಸ್ತಿ ಆಸೆಗಾಗಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಶನಿವಾರ ರಾತ್ರಿ ದೂಪನಹಳ್ಳಿಯ ಮುತ್ತಿಯಾಲಮ್ಮ ದೇವಾಲಯದ ಬಳಿ ತಂದೆ ಮುನಿಕೃಷ್ಣಪ್ಪ ಮತ್ತು ಅವರ ಪುತ್ರರಾದ ಮೋಹನ್ ಕುಮಾರ್ ಹಾಗೂ ಗಜೇಂದ್ರ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಮಗ ಮೋಹನ್ ಕುಮಾರ್ ಹಾಕಿ ಸ್ಟಿಕ್ ಮತ್ತು ರಾಡ್‌ನಿಂದ ತಂದೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ. ತೀವ್ರವಾಗಿ ರಕ್ತಸ್ರಾವಗೊಂಡು ಕುಸಿದುಬಿದ್ದ ಮುನಿಕೃಷ್ಣಪ್ಪ ಅವರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ ಮುನಿಕೃಷ್ಣಪ್ಪ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದು ಮುನಿಕೃಷ್ಣಪ್ಪ ಅವರ ಸ್ವಯಾರ್ಜಿತ ಆಸ್ತಿಯಾಗಿದ್ದು, ಮಕ್ಕಳಿಗೆ ಪಾಲು ನೀಡದ ಕಾರಣ ಹಲವು ಬಾರಿ ಗಲಾಟೆಗಳು ನಡೆಯುತ್ತಿದ್ದವು ಎನ್ನಲಾಗಿದೆ. ಘಟನೆ ಸಂಬಂಧ ಹಲ್ಲೆ ನಡೆಸಿದ ಮೋಹನ್ ಕುಮಾರ್‌ನನ್ನು ಇಂದಿರಾನಗರ ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More