ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರಶ್ರೀಗಳ ಹೆಸರಿಡುವ ಬಗ್ಗೆ ಸಚಿವ ಜಿ ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಸರಿಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಗೃಹ ಸಚಿವ ಪರಮೇಶ್ವರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಸಿಎಂ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ಕೇಂದ್ರ ಸಚಿವ ಸೋಮಣ್ಣ ಅವರೂ ಈ ಪ್ರಸ್ತಾವನೆಯನ್ನು ಬೆಂಬಲಿಸಿದ್ದಾರೆ. ಸರ್ಕಾರದ ಅನುಮೋದನೆ ನಂತರ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗುವುದು.
ತುಮಕೂರು, ಏಪ್ರಿಲ್ 10: ಸಿದ್ಧಗಂಗಾ ಮಠಕ್ಕೆ ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G. Parameshwara) ಭೇಟಿ ನೀಡಿ ಸಿದ್ದಲಿಂಗಶ್ರೀಗಳ ಆಶೀರ್ವಾದ ಪಡೆದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಕುಮಾರ ಸ್ವಾಮೀಜಿ ಹೆಸರಿಡುವ ಪ್ರಸ್ತಾವನೆ ಸರ್ಕಾರಕ್ಕೆ ಬಂದಿದೆ. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ಒಪ್ಪಿಗೆ ಪಡೆದು ಆದೇಶ ಹೊರಡಿಸುತ್ತಾರೆ. ತುಮಕೂರು ರೈಲ್ವೆನಿಲ್ದಾಣಕ್ಕೆ ಶ್ರೀಗಳ ಹೆಸರಿಟ್ಟರೆ ಶಾಶ್ವತವಾಗಿರುತ್ತೆ. ಶ್ರೀಗಳ ಹೆಸರಿಡುವಂತೆ ಕೇಂದ್ರ ಸಚಿವ ಸೋಮಣ್ಣ ಕೂಡ ಪ್ರಸ್ತಾಪಿಸಿದ್ದಾರೆ. ಅವರ ಇಲಾಖೆಯಿಂದ ಶ್ರೀಗಳ ಹೆಸರಿಡಲು ಕೇಂದ್ರದಿಂದ ಮಂಜೂರು ಮಾಡಿಸಿದ್ದಾರೆ. ಶ್ರೀಗಳ ಹೆಸರಿಡುವ ವಿಚಾರದಲ್ಲಿ ವಿಳಂಬವಾಗಿಲ್ಲ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!

Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ

‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?

VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
