ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರಶ್ರೀಗಳ ಹೆಸರಿಡುವ ಬಗ್ಗೆ ಸಚಿವ ಜಿ ಪರಮೇಶ್ವರ್ ಹೇಳಿದ್ದಿಷ್ಟು

ಮಹೇಶ್ ಇ, ಭೂಮನಹಳ್ಳಿ Edited By:

Updated on: Apr 10, 2025 | 10:48 AM

ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಸರಿಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಗೃಹ ಸಚಿವ ಪರಮೇಶ್ವರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಸಿಎಂ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ಕೇಂದ್ರ ಸಚಿವ ಸೋಮಣ್ಣ ಅವರೂ ಈ ಪ್ರಸ್ತಾವನೆಯನ್ನು ಬೆಂಬಲಿಸಿದ್ದಾರೆ. ಸರ್ಕಾರದ ಅನುಮೋದನೆ ನಂತರ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗುವುದು.

ತುಮಕೂರು, ಏಪ್ರಿಲ್​ 10: ಸಿದ್ಧಗಂಗಾ ಮಠಕ್ಕೆ ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G. Parameshwara) ಭೇಟಿ ನೀಡಿ ಸಿದ್ದಲಿಂಗಶ್ರೀಗಳ ಆಶೀರ್ವಾದ ಪಡೆದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಕುಮಾರ ಸ್ವಾಮೀಜಿ ಹೆಸರಿಡುವ ಪ್ರಸ್ತಾವನೆ ಸರ್ಕಾರಕ್ಕೆ ಬಂದಿದೆ. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ಒಪ್ಪಿಗೆ ಪಡೆದು ಆದೇಶ ಹೊರಡಿಸುತ್ತಾರೆ. ತುಮಕೂರು ರೈಲ್ವೆನಿಲ್ದಾಣಕ್ಕೆ ಶ್ರೀಗಳ ಹೆಸರಿಟ್ಟರೆ ಶಾಶ್ವತವಾಗಿರುತ್ತೆ. ಶ್ರೀಗಳ ಹೆಸರಿಡುವಂತೆ ಕೇಂದ್ರ ಸಚಿವ ಸೋಮಣ್ಣ ಕೂಡ ಪ್ರಸ್ತಾಪಿಸಿದ್ದಾರೆ. ಅವರ ಇಲಾಖೆಯಿಂದ ಶ್ರೀಗಳ ಹೆಸರಿಡಲು ಕೇಂದ್ರದಿಂದ ಮಂಜೂರು ಮಾಡಿಸಿದ್ದಾರೆ. ಶ್ರೀಗಳ ಹೆಸರಿಡುವ ವಿಚಾರದಲ್ಲಿ ವಿಳಂಬವಾಗಿಲ್ಲ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...