ಕಲಬುರಗಿ: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ನಡೆಸಿದ ಪ್ರತಿಭಟನೆಗೆ ನಿರೀಕ್ಷೆಗೂ ಮೀರಿದ ಯಶಸ್ಸು!

|

Updated on: Jan 04, 2025 | 5:40 PM

ಇಷ್ಟು ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಜನ ಸೇರುತ್ತಾರೆಂದು ಯಾರೂ ಎಣಿಸಿರಲಿಲ್ಲ. ಬಿಜೆಪಿ ನಾಯಕರಾದ ಸಿಟಿ ರವಿ ಮತ್ತು ಆರ್ ಅಶೋಕ ಮತ್ತು ಇತರ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ಬಸ್​ಗಳಲ್ಲಿ ಕರೆದೊಯ್ದಿದ್ದು ನಿಜವಾದರೂ ಪೊಲೀಸರ ಕ್ರಿಯೆ ಉಳಿದ ಕಾರ್ಯಕರ್ತರ ಮೇಲೆ ಪ್ರಭಾವ ಬೀರಲಿಲ್ಲ. ಬೆಳಗ್ಗೆ ಕೆಲ ಕಾರ್ಯಕರ್ತರಿಂದ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕುವ ಪ್ರಯತ್ನವೂ ನಡೆಯಿತು.

ಕಲಬುರಗಿ: ವಿರೋಧ ಪಕ್ಷದ ನಾಯಕ ಅರ್ ಅಶೋಕ, ವಿಧಾನ ಪರಿಷತ್ ನಲ್ಲಿ ವಿಪಕ್ಷ ನಾಯಕನಾಗಿರುವ ಚಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯರಾದ ರವಿ ಕುಮಾರ್ ಮತ್ತು ಸಿಟಿ ರವಿ ನೇತೃತ್ವದಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಸಾವಿನ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಮುಖಂಡರು ನಡೆಸಿದ ಪ್ರತಿಭಟನೆ ನಿರೀಕ್ಷೆಗೂ ಮೀರಿ ಯಶ ಕಂಡಿತು. ಪ್ರತಿಭಟನೆಕಾರರು, ತಮ್ಮ ನಾಯಕರ ಜೊತೆ ಘೋಷಣೆಗಳನ್ನು ಕೂಗುತ್ತಾ ನಡೆದು ಬರುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಸಚಿನ್ ಸಾವಿಗೆ ಸಚಿವ ಪ್ರಿಯಾಂಕ್ ಖರ್ಗೆ ಹೊಣೆಗಾರ ಎಂದು ಬರೆದ ಪ್ಲಕಾರ್ಡ್​​ಗಳನ್ನು ಪ್ರತಿಭಟನೆಕಾರರು ಹಿಡಿದಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆಗೆ ಯತ್ನ: ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರ ಪ್ರತಿಭಟನೆ