ಕನ್ನಡ ಬಿಗ್ ಬಾಸ್ ನಿಲ್ಲಿಸುವಂತೆ ಜಾಲಿವುಡ್ ಸ್ಟುಡಿಯೋ ಎದುರು ಪ್ರತಿಭಟನೆ

Updated on: Oct 07, 2025 | 3:11 PM

‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ಬಿಗ್ ಬಾಸ್ ಮನೆ ನಿರ್ಮಾಣ ಆಗಿರುವ ‘ಜಾಲಿವುಡ್ ಸ್ಟುಡಿಯೋಸ್’ ಜಾಗಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆದಿಲ್ಲ ಎಂಬ ಆರೋಪ ಇದೆ. ಹಾಗಾಗಿ ಶೋ ನಿಲ್ಲಿಸುವಂತೆ ಪ್ರತಿಭಟನೆ ಮಾಡಲಾಗಿದೆ.

ಕಿಚ್ಚ ಸುದೀಪ್ ನಡೆಸಿಕೊಡುತ್ತಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ರಿಯಾಲಿಟಿ ಶೋಗೆ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ಬಿಗ್ ಬಾಸ್ ಮನೆ ನಿರ್ಮಾಣ ಆಗಿರುವ ‘ಜಾಲಿವುಡ್ ಸ್ಟುಡಿಯೋಸ್’ (Jollywood Studios And Adventures) ಮಾಲಿಕರು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ (Pollution Control Board) ಅನುಮತಿ ಪಡೆದಿಲ್ಲ ಎಂಬ ಆರೋಪ ಇದೆ. ಹಾಗಾಗಿ ಶೋ ನಿಲ್ಲಿಸುವಂತೆ ಪ್ರತಿಭಟನೆ ಮಾಡಲಾಗಿದೆ. ಜಾಲಿವುಡ್ ಸ್ಟುಡಿಯೋ ಎದುರಿನಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ‘ನಿಲ್ಲಿಸಿ.. ನಿಲ್ಲಿಸಿ.. ಬಿಗ್ ಬಾಸ್ ನಿಲ್ಲಿಸಿ’ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.