ಹೊತ್ತಿ ಉರಿದ ದಿನಸಿ ಅಂಗಡಿ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ

Updated on: Oct 26, 2025 | 7:28 AM

ದಿನಸಿ ಅಂಗಡಿಯೊಂದು ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಬನಶಂಕರಿಯ ಬ್ಯಾಂಕ್ ಕಾಲೋನಿಯಲ್ಲಿ ನಡೆದಿದೆ.  ರಾತ್ರಿ 10.30ಕ್ಕೆ ದಿನಸಿ ಅಂಗಡಿಯನ್ನ ಕ್ಲೋಸ್ ಮಾಡಲಾಗಿತ್ತು. ಬಳಿಕ ರಾತ್ರಿ 11 ಗಂಟೆ ವೇಳೆಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಚಾರ ಗೊತ್ತಾಗುತ್ತಿದ್ದಂತೆ ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರು, ಅಕ್ಟೋಬರ್​ 26: ಏಕಾಏಕಿ ಕಾಣಿಸಿಕೊಂಡ ಬೆಂಕಿಯಿಂದಾಗಿ ದಿನಸಿ ಅಂಗಡಿ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ (Bengaluru) ಬನಶಂಕರಿಯ ಬ್ಯಾಂಕ್ ಕಾಲೋನಿಯಲ್ಲಿ ನಡೆದಿದೆ. ಶಂಭುಶೆಟ್ಟಿ ಎಂಬುವರಿಗೆ ಸೇರಿದ ಅಂಗಡಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ  ಅವಘಡ ನಡೆದಿದೆ. ಎರಡು ಅಂತಸ್ತಿನ ಕಟ್ಟಡದಲ್ಲಿ ಅಂಗಡಿ ಇದ್ದು, ನೆಲ ಮಹಡಿಯಲ್ಲಿದ್ದ ಯುಪಿಎಸ್​ ಸಿಡಿದು ಬೆಂಕಿ ಹೊತ್ತಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೊದಲ ಮಹಡಿಯವರೆಗೂ ಬೆಂಕಿಯ ಜ್ವಾಲೆ ಆವರಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ದಿನಸಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.