PSG ಚಾಂಪಿಯನ್ಸ್​… ಈ ಸಲ ಕಪ್ RCBಗೆ?

Updated on: May 31, 2026 | 2:29 PM

ಶನಿವಾರ ಬುಡಾಪೆಸ್ಟ್‌ನ ಪುಸ್ಕಾಸ್ ಅರೆನಾದಲ್ಲಿ ನಡೆದ 2026ರ ಯುಇಎಫ್‌ಎ ಚಾಂಪಿಯನ್ಸ್ ಲೀಗ್​ ಫೈನಲ್ ಪಂದ್ಯದಲ್ಲಿ PSG ತಂಡವು ಆರ್ಸೆನಲ್ ಕ್ಲಬ್ ವಿರುದ್ಧ ಪೆನಾಲ್ಟಿ ಶೂಟೌಟ್‌ನಲ್ಲಿ 4–3 ಅಂತರದಿಂದ ಜಯಗಳಿಸಿ ಇತಿಹಾಸ ನಿರ್ಮಿಸಿದೆ. ಈ ಮೂಲಕ ಪ್ಯಾರಿಸ್ ಸೈಂಟ್-ಜರ್ಮೈನ್ ತಂಡವು ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟಕ್ಕೇರಿದೆ.

ಯುಇಎಫ್‌ಎ ಚಾಂಪಿಯನ್ಸ್ ಲೀಗ್​ನಲ್ಲಿ ಫ್ರಾನ್ಸ್ ಕ್ಲಬ್ ಪ್ಯಾರಿಸ್ ಸೈಂಟ್-ಜರ್ಮೈನ್ (PSG) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಬೆನ್ನಲ್ಲೇ ಈ ಬಾರಿ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೂಡ ಚಾಂಪಿಯನ್ ಪಟ್ಟಕ್ಕೇರಲಿದೆ ಎಂಬ ಲೆಕ್ಕಾಚಾರಗಳು ಶುರುವಾಗಿದೆ. ಇಂತಹದೊಂದು ಲೆಕ್ಕಾಚಾರಕ್ಕೆ ಮುಖ್ಯ ಕಾರಣ ಉಭಯ ತಂಡಗಳ ನಡುವಣ ಸಾಮ್ಯತೆ.

ಪ್ಯಾರಿಸ್ ಸೈಂಟ್-ಜರ್ಮೈನ್ ತಂಡವು ಯುರೋಪ್​ನ ಬಲಿಷ್ಠ ಫುಟ್​ಬಾಲ್ ತಂಡ ಎನಿಸಿಕೊಂಡರೂ ಮೊದಲ ಯುಇಎಫ್‌ಎ ಚಾಂಪಿಯನ್ಸ್ ಲೀಗ್ ಟ್ರೋಫಿ ಗೆಲ್ಲಲು ತೆಗೆದುಕೊಂಡಿದ್ದು ಬರೋಬ್ಬರಿ 55 ವರ್ಷಗಳು. ಅದರಂತೆ 2025 ರ ಚಾಂಪಿಯನ್ಸ್ ಲೀಗ್​ ಫೈನಲ್​ನಲ್ಲಿ ಇಂಟರ್ ಮಿಲಾನ್ ತಂಡವನ್ನು 5-0 ಅಂತರದಿಂದ ಮಣಿಸಿ ಚೊಚ್ಚಲ ಬಾರಿ ಟ್ರೋಫಿ ಮುಡಿಗೇರಿಸಿಕೊಂಡಿತ್ತು.

ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್​ನ ಬಲಿಷ್ಠ ತಂಡ ಎನಿಸಿಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಲು 18 ವರ್ಷಗಳನ್ನು ತೆಗೆದುಕೊಂಡಿತ್ತು. ಅದರಂತೆ ಐಪಿಎಲ್ 2025ರ ಫೈನಲ್​ನಲ್ಲಿ ಪಂಜಾಬ್ ಕಿಂಗ್ಸ್ ಮಣಿಸಿ ಮೊದಲ ಬಾರಿ ಚಾಂಪಿಯನ್ ಪಟ್ಟಕ್ಕೇರಿತ್ತು.

ಉಭಯ ತಂಡಗಳು ಸುದೀರ್ಘ ಕಾಯುವಿಕೆಯ ಬಳಿಕ 2025 ರಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದರು. ಆದರೆ ಮೊದಲ ಚಾಂಪಿಯನ್ ಪಟ್ಟದ ಬೆನ್ನಲ್ಲೇ ಪ್ಯಾರಿಸ್ ಸೈಂಟ್-ಜರ್ಮೈನ್ (PSG) ತನ್ನ ಕಿರೀಟ ಮುಡಿಗೇರಿಸಿಕೊಂಡಿದೆ.

ಅಂದರೆ ಶನಿವಾರ ಬುಡಾಪೆಸ್ಟ್‌ನ ಪುಸ್ಕಾಸ್ ಅರೆನಾದಲ್ಲಿ ನಡೆದ 2026ರ ಯುಇಎಫ್‌ಎ ಚಾಂಪಿಯನ್ಸ್ ಲೀಗ್​ ಫೈನಲ್ ಪಂದ್ಯದಲ್ಲಿ PSG ತಂಡವು ಆರ್ಸೆನಲ್ ಕ್ಲಬ್ ವಿರುದ್ಧ ಪೆನಾಲ್ಟಿ ಶೂಟೌಟ್‌ನಲ್ಲಿ 4–3 ಅಂತರದಿಂದ ಜಯಗಳಿಸಿ ಇತಿಹಾಸ ನಿರ್ಮಿಸಿದೆ. ಈ ಮೂಲಕ ಪ್ಯಾರಿಸ್ ಸೈಂಟ್-ಜರ್ಮೈನ್ ತಂಡವು ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟಕ್ಕೇರಿದೆ.

ಅಂದರೆ ಪ್ಯಾರಿಸ್ ಸೈಂಟ್-ಜರ್ಮೈನ್ ತಂಡವು 2025, 2026 ರಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇತ್ತ ಕಳೆದ ಬಾರಿ ಪಿಎಸ್​ಜಿ ಚಾಂಪಿಯನ್ ಆದ ಬಳಿಕ ಆರ್​ಸಿಬಿ ಚಾಂಪಿಯನ್ ಪಟ್ಟಕ್ಕೇರಿತ್ತು. ಇದೀಗ ಪಿಎಸ್​ಜಿ ಮತ್ತೊಮ್ಮೆ ಯುರೋಪ್ ಲೀಗ್​ನಲ್ಲಿ ಕಿರೀಟ ಮುಡಿಗೇರಿಸಿಕೊಂಡಿರುವ ಕಾರಣ, ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೂಡ 2ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಲಿದೆ ಎಂಬ ಲೆಕ್ಕಾಚಾರಗಳು ಶುರುವಾಗಿದೆ.

 

Follow Us
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More