PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಪಾಕಿಸ್ತಾನ್ ಸೂಪರ್ ಲೀಗ್ನ 13ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಲ್ತಾನ್ ಸುಲ್ತಾನ್ಸ್ ತಂಡವು 20 ಓವರ್ಗಳಲ್ಲಿ 168 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಸ್ಲಾಮಾಬಾದ್ ಯುನೈಟೆಡ್ ತಂಡವು 17.1 ಓವರ್ಗಳಲ್ಲಿ 171 ರನ್ ಬಾರಿಸಿ 7 ವಿಕೆಟ್ಗಳ ಗೆಲುವು ದಾಖಲಿಸಿದೆ.
PSL 2025: ಪಾಕಿಸ್ತಾನ್ ಸೂಪರ್ ಲೀಗ್ನ 13ನೇ ಪಂದ್ಯದಲ್ಲಿ ಆಟಗಾರರ ನಡುವೆ ವಾಗ್ಯುದ್ಧ ನಡೆದಿದೆ. ಮುಲ್ತಾನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಇಸ್ಲಾಮಾಬಾದ್ ಯುನೈಟೆಡ್ ಹಾಗೂ ಮುಲ್ತಾನ್ ಸುಲ್ತಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಮುಲ್ತಾನ್ ಸುಲ್ತಾನ್ಸ್ ತಂಡವು 20 ಓವರ್ಗಳಲ್ಲಿ 168 ರನ್ ಕಲೆಹಾಕಿತು.
ಈ ಗುರಿಯನ್ನು ಬೆನ್ನತ್ತಿದ ಇಸ್ಲಾಮಾಬಾದ್ ಯುನೈಟೆಡ್ ತಂಡದ ಪರ ಕಾಲಿನ್ ಮನ್ರೊ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಇದರ ನಡುವೆ ಇಫ್ತಿಕಾರ್ ಅಹ್ಮದ್ ಬೌಲಿಂಗ್ಗೆ ಆಗಮಿಸಿದ್ದಾರೆ. ಅಲ್ಲದೆ 10ನೇ ಓವರ್ನ 3ನೇ ಎಸೆತದಲ್ಲಿ ಯಾರ್ಕರ್ ಎಸೆದಿದ್ದಾರೆ.
ಚೆಂಡನ್ನು ರಕ್ಷಣಾತ್ಮಕವಾಗಿ ಆಡಿದ ಕಾಲಿನ್ ಮನ್ರೊ, ಇದು ಕಾನೂನು ಬಾಹಿರ ಎಸೆದ ಎಂದು ಆರೋಪಿಸಿದ್ದಾರೆ. ನೀವು ಕೈಯನ್ನು ನಿಗದಿತ ಮಿತಿಗಿಂತ ಹೆಚ್ಚಾಗಿ ಬೆಂಡ್ ಮಾಡುತ್ತಿದ್ದೀರಿ ಎಂದು ಮನ್ರೊ ದೂರಿದ್ದಾರೆ.
ಇದರಿಂದ ಕೋಪಗೊಂಡ ಇಫ್ತಿಕಾರ್ ಅಹ್ಮದ್ ಜಗಳಕ್ಕಿಳಿದಿದ್ದಾರೆ. ಈ ವೇಳೆ ಆಗಮಿಸಿದ ಮುಲ್ತಾನ್ ಸುಲ್ತಾನ್ಸ್ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಕೂಡ ಕಾಲಿನ್ ಮನ್ರೊ ಜೊತೆ ಮಾತಿನ ಚಕಮಕಿ ನಡೆಸಿದರು. ಪರಿಸ್ಥಿತಿ ಕೈ ತಪ್ಪಿ ಹೋಗುತ್ತಿರುವುದನ್ನು ಗಮನಿಸಿದ ಅಂಪೈರ್ಗಳು ಮಧ್ಯ ಪ್ರವೇಶಿಸಿ ಆಟವನ್ನು ಮುಂದುವರೆಸಲು ಕೇಳಿಕೊಂಡಿದ್ದಾರೆ. ಇದೀಗ ಈ ವಾಕ್ಸಮರದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇನ್ನು ಈ ಪಂದ್ಯದಲ್ಲಿ ಮುಲ್ತಾನ್ ಸುಲ್ತಾನ್ಸ್ ನೀಡಿದ 169 ರನ್ಗಳ ಗುರಿಯನ್ನು ಇಸ್ಲಾಮಾಬಾದ್ ಯುನೈಟೆಡ್ ತಂಡವು 17.1 ಓವರ್ಗಳಲ್ಲಿ ಚೇಸ್ ಮಾಡಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.