ರಾತ್ರಿ ವೇಳೆ ಮಹಿಳೆಯರ ಒಳ ಉಡುಪು ಕಳ್ಳತನ ಮಾಡುತ್ತಿದ್ದ ಸೈಕೋ ವ್ಯಕ್ತಿ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
ನಗರದ ಘಂಟಿಕೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ನಡೆದಿದೆ. ಇನ್ನು ಇತನ ಭಯಕ್ಕೆ ಈ ಊರಿನ ಜನರು ಸರಿಯಾಗಿ ನಿದ್ದೆ ಮಾಡುವಂತಿಲ್ಲ. ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಅಲ್ಲಿನ ಸ್ಥಳೀಯರು ಹೇಳಿದ್ದಾರೆ. ಮನೆಗಳ ಮುಂದೆ ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ರಾತ್ರಿ ಸಮಯದಲ್ಲಿ ಬಂದು ಕಳ್ಳತನ ಮಾಡುತ್ತಿದ್ದಾನೆ.
ಹುಬ್ಬಳ್ಳಿಯಲ್ಲಿ ವ್ಯಕ್ತಿಯೊರ್ವ ಮಹಿಳೆಯರ ಒಳ ಉಡುಪು ಕಳ್ಳತನ ಮಾಡುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸೈಕೋ ವ್ಯಕ್ತಿ ಮಹಿಳೆಯರ ಒಳ ಉಡುಪನ್ನು ಮಾತ್ರ ಕಳ್ಳತನ ಮಾಡಿರುವ ಬಗ್ಗೆ ಸ್ಥಳೀಯರು ದೂರಿದ್ದಾರೆ. ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ನಗರದ ಘಂಟಿಕೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ನಡೆದಿದೆ. ಇನ್ನು ಇತನ ಭಯಕ್ಕೆ ಈ ಊರಿನ ಜನರು ಸರಿಯಾಗಿ ನಿದ್ದೆ ಮಾಡುವಂತಿಲ್ಲ. ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ಅಲ್ಲಿನ ಸ್ಥಳೀಯರು ಹೇಳಿದ್ದಾರೆ. ಮನೆಗಳ ಮುಂದೆ ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ರಾತ್ರಿ ಸಮಯದಲ್ಲಿ ಬಂದು ಕಳ್ಳತನ ಮಾಡುತ್ತಿದ್ದಾನೆ. ಇನ್ನು ಈ ಘಟನೆಯ ಬಗ್ಗೆ ಅಲ್ಲಿನ ಜನ ಪೊಲೀಸರಿಗೆ ದೂರು ನೀಡಿದ್ದಾರೆ. ಆತನನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

