AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಮಹಿಳೆಯರ ಒಳ ಉಡುಪುಗಳನ್ನೇ ಕದ್ದು ಧರಿಸುವ ಸೈಕೋ! ಸಿಸಿಟಿವಿಯಲ್ಲಿ ಸೆರೆಯಾಯ್ತು ವಿಕೃತಿಯ ದೃಶ್ಯ

ಚಾಮರಾಜನಗರ: ಮಹಿಳೆಯರ ಒಳ ಉಡುಪುಗಳನ್ನೇ ಕದ್ದು ಧರಿಸುವ ಸೈಕೋ! ಸಿಸಿಟಿವಿಯಲ್ಲಿ ಸೆರೆಯಾಯ್ತು ವಿಕೃತಿಯ ದೃಶ್ಯ

ಸೂರಜ್ ಪ್ರಸಾದ್ ಎಸ್ಎನ್
| Edited By: |

Updated on: Apr 08, 2026 | 9:05 AM

Share

ಚಾಮರಾಜನಗರದ ಹೌಸಿಂಗ್ ಬೋರ್ಡ್‌ನಲ್ಲಿ ಮಹಿಳೆಯರ ಒಳ ಉಡುಪುಗಳನ್ನು ಕದ್ದು ವಿಕೃತಿ ಮೆರೆಯುತ್ತಿದ್ದ ಸೈಕೋಪಾತ್‌ನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಿಳೆಯ ವೇಷದಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ವ್ಯಕ್ತಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸದ್ಯ, ಒಳುಡುಪು ಕದ್ದು ತೆರಳುತ್ತಿರುವ ಸಿಸಿಟಿವಿ ದೃಶ್ಯ ವೈರಲ್ ಆಗುತ್ತಿದೆ. ವಿಡಿಯೋ ಇಲ್ಲಿದೆ.

ಚಾಮರಾಜನಗರ, ಏಪ್ರಿಲ್ 8: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ವಿಚಿತ್ರ ಸೈಕೋಪಾತ್‌ ಒಬ್ಬನ ಕೈಚಳಕ ಮಹಿಳೆಯರಲ್ಲಿ ಭೀತಿ ಹುಟ್ಟಿಸಿದೆ. ಇಲ್ಲಿನ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯರ ಒಳ ಉಡುಪುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಮನೆಗಳ ಮುಂದೆ ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳು ಪದೇ ಪದೇ ನಾಪತ್ತೆಯಾಗುತ್ತಿದ್ದವು. ಇದರಿಂದ ಸಂಶಯಗೊಂಡ ನಿವಾಸಿಗಳು ಸಿಸಿಟಿವಿ ಕ್ಯಾಮೆರಾವನ್ನು ಪರಿಶೀಲಿಸಿದಾಗ ಅಸಲಿ ಸತ್ಯ ಕಂಡು ಬೆಚ್ಚಿಬಿದ್ದಿದ್ದಾರೆ. ತಡರಾತ್ರಿ ಮಹಿಳೆಯ ವೇಷದಲ್ಲಿ ಬರುವ ಈ ವ್ಯಕ್ತಿ, ಒಳ ಉಡುಪುಗಳನ್ನು ಕದ್ದು, ಸ್ಥಳದಲ್ಲೇ ಅವುಗಳನ್ನು ಧರಿಸಿಕೊಂಡು ವಿಕೃತಿ ಮೆರೆಯುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಸೈಕೋಪಾತ್‌ನ ವಿಚಿತ್ರ ವರ್ತನೆಯಿಂದ ಕಾಲೋನಿಯ ಮಹಿಳೆಯರು ಆತಂಕಕ್ಕೊಳಗಾಗಿದ್ದಾರೆ. ಸದ್ಯ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆರೋಪಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸೂರಜ್ ಪ್ರಸಾದ್ ಎಸ್ಎನ್
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More