ಪಬ್ ಬೆಂಕಿ ದುರಂತ, ಬೆಂಗಳೂರು; ಸುತ್ತಮುತ್ತ ಶಾಲಾ ಕಾಲೇಜುಗಳಿದ್ದರೂ ಪಬ್ ನಡೆಸಲು ಅನುಮತಿ ನೀಡಲಾಗಿದೆ: ಪ್ರತ್ಯಕ್ಷದರ್ಶಿ

ಅರುಣ್​ ಕುಮಾರ್​ ಬೆಳ್ಳಿ

Updated on: Oct 18, 2023 | 2:54 PM

ಪ್ರತ್ಯಕ್ಷದರ್ಶಿಯೊಬ್ಬರು ಹೇಳುವ ಪ್ರಕಾರ ಪಬ್ ಇರುವ ಜಾಗದ ಸುತ್ತಮುತ್ತ ಶಾಲಾ ಕಾಲೇಜುಗಳಿದ್ದರೂ ಅದನ್ನು ನಡೆಸಲು ಅನುಮತಿ ನೀಡಲಾಗಿದೆ. ಟಿವಿ9 ಕನ್ನಡ ವಾಹಿನಿಯ ವರದಿಗಾರ್ತಿಯೊಂದಿಗೆ ಮಾತಾಡಿರುವ ಅವರು, ಬೆಳಗ್ಗೆ 10 ಗಂಟೆಯಿಂದ ರಾತ್ರಿ 2 ಗಂಟೆಯವರೆಗೆ ಪಬ್ ಓಪನ್ ಇರುತ್ತದೆ ಮತ್ತು ಜೋರು ಧ್ವನಿಯಲ್ಲಿ ಮ್ಯೂಸಿಕ್ ಸಿಸ್ಟಮ್ ಗಳು ಆನ್ ಮಾಡುವುದರಿಂದ ಸುತ್ತಮುತ್ತ ವಾಸ ಮಾಡುವ ಜನರಿಗೆ ನಿದ್ದೆ ಮಾಡಲಾಗುತ್ತಿಲ್ಲ ಎಂದು ಹೇಳುತ್ತಾರೆ.

ಬೆಂಗಳೂರು: ನಗರದಲ್ಲಿ ಬೆಂಕಿ ಅಕಸ್ಮಿಕಗಳು ಮೇಲಿಂದ ಮೇಲೆ ಜರುಗುತ್ತಿವೆ. ಅತ್ತಿಬೆಲೆಯಲ್ಲಿ ಪಟಾಕಿಯಿದ್ದ ಗೋದಾಮಿನಲ್ಲಿ ದುರಂತ (Attibele fire tragedy) ಸಂಭವಿಸಿದ ಬಳಿಕ ಸಾಲುಸಾಲಾಗಿ ಅಗ್ನಿ ಅವಗಢಗಳಳು ನಡೆಯುತ್ತಿವೆ. ಇಂದು ಬೆಳಗ್ಗೆ ತಾವರೆಕೆರೆ ಮುಖ್ಯರಸ್ತೆಯೊಂದರಲ್ಲಿರುವ ಒಂದು ಪಬ್ ನಲ್ಲಿ (pub on Tavarekere road) ಸಿಲಿಂಡರ್ ಗಳು ಸ್ಫೋಟಗೊಂಡ (Cylinder blast) ಕಾರಣ ಮತ್ತೊಂದು ಅಗ್ನಿ ದುರಂತ ಜರುಗಿದೆ. ದುರಂತ ಸಂಭವಿಸಿದಾಗ ಪ್ರಾಣವುಳಿಸಿಕೊಳ್ಳಲು ಪ್ರೇಮ್ ಹೆಸರಿನ ಯುವಕನೊಬ್ಬ ಕಟ್ಟಡದ ನಾಲ್ಕನೇ ಅಂತಸ್ತಿನಿಂದ ಜಿಗಿದ ದೃಶ್ಯ ವೈರಲ್ ಅಗಿದೆ. ಅವನಿಗೆ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ. ಪ್ರತ್ಯಕ್ಷದರ್ಶಿಯೊಬ್ಬರು ಹೇಳುವ ಪ್ರಕಾರ ಪಬ್ ಇರುವ ಜಾಗದ ಸುತ್ತಮುತ್ತ ಶಾಲಾ ಕಾಲೇಜುಗಳಿದ್ದರೂ ಅದನ್ನು ನಡೆಸಲು ಅನುಮತಿ ನೀಡಲಾಗಿದೆ. ಟಿವಿ9 ಕನ್ನಡ ವಾಹಿನಿಯ ವರದಿಗಾರ್ತಿಯೊಂದಿಗೆ ಮಾತಾಡಿರುವ ಅವರು, ಬೆಳಗ್ಗೆ 10 ಗಂಟೆಯಿಂದ ರಾತ್ರಿ 2 ಗಂಟೆಯವರೆಗೆ ಪಬ್ ಓಪನ್ ಇರುತ್ತದೆ ಮತ್ತು ಜೋರು ಧ್ವನಿಯಲ್ಲಿ ಮ್ಯೂಸಿಕ್ ಸಿಸ್ಟಮ್ ಗಳು ಆನ್ ಮಾಡುವುದರಿಂದ ಸುತ್ತಮುತ್ತ ವಾಸ ಮಾಡುವ ಜನರಿಗೆ ನಿದ್ದೆ ಮಾಡಲಾಗುತ್ತಿಲ್ಲ ಎಂದು ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.