ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಗದಗ ಜಿಲ್ಲೆಯ ಶಿರಹಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅವಧಿ ಮೀರಿದ ಔಷಧಿಗಳನ್ನು ವಿತರಿಸಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರಶ್ನಿಸಿದರೆ ಚಿಕಿತ್ಸೆಗೆ ಬಂದ ರೋಗಿಗಳನ್ನು ವೈದ್ಯರು ಹೊರಹಾಕಿ, ಗೂಂಡಾಗಳಂತೆ ವರ್ತಿಸುತ್ತಿದ್ದಾರೆಂದು ರೋಗಿಗಳು ಆರೋಪಿಸಿದ್ದಾರೆ. ಆಸ್ಪತ್ರೆಯು ಬಡವರ ಪಾಲಿಗೆ ಯಮಸ್ವರೂಪಿಯಾಗಿದೆ ಎಂದು ದೂರಿದ್ದಾರೆ.
ಗದಗ, ಫೆಬ್ರವರಿ 23: ಗದಗ ಜಿಲ್ಲೆಯ ಶಿರಹಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮುಗಿದ ಔಷಧಿ ವಿತರಣೆ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರಶ್ನಿಸಿದವರಿಗೆ ತಾಲೂಕಾ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಗೋಪಾಲ್ ರಾಜ್ ಪೊಲೀಸ್ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿರುವ ಸಾರ್ವಜನಿಕರು, ಆಡಳಿತಾಧಿಕಾರಿ ನಡೆಗೆ ಕಿಡಿ ಕಾರಿದ್ದಾರೆ. ಶಶಿ ಪಾಟೀಲ್, ಪ್ರಕಾಶ್ ಎಂಬುವರ ವಿರುದ್ಧ ಡಾ.ಗೋಪಾಲ್ ರಾಜ್ ದೂರು ಸಹ ನೀಡಿದ್ದು, ಸದ್ಯ ಪ್ರತಿ ದೂರು ನೀಡಲು ರೋಗಿಗಳು ಮತ್ತು ಸಂಬಂಧಿಕರು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ

